The doctor successfully reattached the hand of a laborer who got stuck in a tree cutting machine! ಮರ ಕತ್ತರಿಸುವ ಯಂತ್ರಕ್ಕೆ ಸಿಲುಕಿ ತುಂಡಾಗಿದ್ದ ಕಾರ್ಮಿಕನ ಕೈಯನ್ನು, ಯಶಸ್ವಿಯಾಗಿ ಮರುಜೋಡಿಸಿದ ವೈದ್ಯರು!

shimoga | ಮರ ಕತ್ತರಿಸುವ ಯಂತ್ರಕ್ಕೆ ಸಿಲುಕಿ ತುಂಡಾಗಿದ್ದ ಕಾರ್ಮಿಕನ ಕೈಯನ್ನು, ಯಶಸ್ವಿಯಾಗಿ ಮರುಜೋಡಿಸಿದ ವೈದ್ಯರು!

ಶಿವಮೊಗ್ಗ (shivamogga), ಆ. 23: ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವ ಮೂಲಕ ಅಪರೂಪದ ಸಾಧನೆ ಮಾಡುವಲ್ಲಿ ಶಿವಮೊಗ್ಗದ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ಸು ಸಾಧಿಸಿ ರೋಗಿಗೆ ಮರು ಜೀವನವನ್ನು ಕಲ್ಪಿಸಿದೆ.

ಜಿಲ್ಲೆಯ ಸಾಮಿಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಕಾರ್ಮಿಕರೊಬ್ಬರ ಕೈ ಆಕಸ್ಮಿಕವಾಗಿ ಮರ ಕೊಯ್ಯುವ ಯಂತ್ರಕ್ಕೆ ಸಿಲುಕಿ ಎರಡು ತುಂಡಾಗಿತ್ತು.

ಸಂಪೂರ್ಣ ಕತ್ತರಿಸಿದ ಮುಂಗೈಯನ್ನು ಐಸ್ ಬಾಕ್ಸ್ ನಲ್ಲಿ ಇಟ್ಟುಕೊಂಡು ರೋಗಿಯು ಆಸ್ಪತ್ರೆಯ ಅಪಘಾಥ ವಿಭಾಗಕ್ಕೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಸತತವಾಗಿ 7 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದು, ಮುಂಗೈನ ಮಾಂಸಖಂಡ , ಮೂಳೆ ಹಾಗೂ ನರಗಳನ್ನು ಯಶಸ್ವಿಯಾಗಿ ಮರು ಜೋಡಿಸಿ ರೋಗಿಗೆ ಹೊಸ ಬದುಕು ಕೊಟ್ಟಿದ್ದಾರೆ. 

ರೋಗಿಗೆ ಉತ್ತಮ ಆರೈಕೆ ಮಾಡಿ ಒಂದು ವಾರದ ಬಳಿಕ ಡಿಸ್ಚಾರ್ಜ್ ಮಾಡಲಾಗಿತ್ತು, ಆನಂತರ  ಕಾಲ ಕಾಲಕ್ಕೆ ತಪಾಸಣೆ ನಡೆಸಿ, ಇದೀಗ  ಕೈ ಚಲನವಲನ ಚೆನ್ನಾಗಿದ್ದು, ರೋಗಿಯು ಚೇತರಿಸಿಕೊಂಡಿದ್ದಾರೆ. ಸರ್ಜಿ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಹಾಗೂ ಮೂಳೆ ರೋಗ ತಜ್ಞರಾದ ಡಾ.ಮಂಜುನಾಥ್, ವೈದ್ಯಕೀಯ ಅಧೀಕ್ಷಕ ಹಾಗೂ ಅರಿವಳಿಕೆ ತಜ್ಞರಾದ ಡಾ.ವಾದಿರಾಜ ಕುಲಕರ್ಣಿ ಮತ್ತು ಡಾ.ಮೂರ್ಕಣಪ್ಪ, ಡಾ.ಸಂತೋಷ್, ಡಾ. ಅರ್ಜುನ್  ಅವರ ತಂಡ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ.

ತುಂಡಾದ ಕೈ ಮರು ಜೋಡಣೆ , ಹೇಗೆ ಸಾಧ್ಯ :

ಅಪಘಾತ ಅಥವಾ ದುರಂತದಲ್ಲಿ ಕೈ- ಕಾಲು, ಬೆರಳು ಸೇರಿದಂತೆ ಯಾವುದೇ ಅಂಗಗಳು ಕತ್ತರಿಸಿದಾಗ ಅಯ್ಯೋ ಜೀವನ ಮುಗಿದೇ ಹೋಯ್ತು ಎಂದು ಚಿಂತಾಕ್ರಾಂತರಾಗುವುದಕ್ಕಿಂತ ಆ ಕ್ದಣ ಸ್ವಲ್ಪ ಯೋಚಿಸಿ ಮುಂಜಾಗ್ರತಾ ಕ್ರಮಗಳನ್ನು ಕ್ರಮ ಕೈಗೊಂಡರೆ ಮತ್ತೆ ಹೊಸ ಬದಕನ್ನು ಕಂಡುಕೊಳ್ಳಬಹುದು. 

ಅವಘಡ ಸಂಭವಿಸಿ ಕೈ- ಕಾಲು, ಬೆರಳು ಸೇರಿದಂತೆ ಯಾವುದೇ ಅಂಗಗಳು ತುಂಡಾಗಿದ್ದರೆ ಭಯಪಡದೇ ಆತ್ಮಸ್ಥೈರ್ಯದೊಂದಿಗೆ ತುಂಡಾದ ಭಾಗವನ್ನು ಪ್ಲಾಸ್ಟಿಕ್ ಕವರ್ ನೊಂದಿಗೆ  ಐಸ್ ಬಾಕ್ಸ್ ನಲ್ಲಿಟ್ಟು 6 ಗಂಟೆಯೊಳಗೆ ಆಸ್ಪತ್ರೆಗೆ ತಂದರೆ ಶಸ್ತ್ರ ಚಿಕಿತ್ಸೆ ಮಾಡಿ ಮರು ಜೋಡಿಸಲು ಸಾದ್ಯವಿದೆ, ಆದರೆ ಇದು ಬಹಳಷ್ಟು ಜನರಿಗೆ ಸಾಧ್ಯವಾಗುವುದಿಲ್ಲ. 

ಘಟನೆ ನಡೆದಾಗ ಭಯ ಭೀತರಾಗಿ ಕಟ್ ಆದ ಭಾಗವನ್ನು ತರದೇ ಮರೆತು ಆಸ್ಪತ್ರೆಗೆ ಬರುವ ಸಾಧ್ಯತೆಗಳೇ ಹೆಚ್ಚು. ಇಲ್ಲವೆ ಬಹಳ ತಡವಾಗಿ ಬಂದರೆ ತುಂಡಾದ ಭಾಗದ ಮಾಂಸ ಖಂಡಗಳು ಕೊಳೆತಂತಾಗುತ್ತವೆ, ಜೀವಕೋಶಗಳು ಸಾಯುತ್ತವೆ, ಹಾಗಾಗಿ ಚಿಕಿತ್ಸೆ ಮಾಡಿದರೂ ಯಶಸ್ವಿ ಆಗುವುದಿಲ್ಲ.

ಆದರೆ ಈ ಘಟನೆಯಲ್ಲಿ ರೋಗಿಯು ಎಚ್ಚೆತ್ತುಕೊಂಡು ಸಕಾಲಕ್ಕೆ ತುಂಡಾದ ಕೈಯೊಂದಿಗೆ ಬಂದಿದ್ದರಿಂದ 7 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಮರು ಜೋಡಿಸಲು ಸಾಧ್ಯವಾಗಿದೆ. ತುಂಡಾದ ಭಾಗಗಳನ್ನು ಯಾವುದೇ ಕಾರಣಕ್ಕೂ ನೇರವಾಗಿ ನೀರಿನಲ್ಲಿ ಅಥವಾ ಐಸ್ ಬಾಕ್ಸ್ ನೊಳಗೆ ಇಟ್ಟುಕೊಂಡು ಬರಬಾರದು. 

ಬದಲಾಗಿ ಪ್ಲಾಸ್ಟಿಕ್ ಕವರ್ ನಲ್ಲಿಟ್ಟು ಐಸ್ ಬಾಕ್ಸ್ ನಲ್ಲಿಟ್ಟು ತರಬೇಕು, ಹೀಗೆ ಮಾಡಿದಾಗ ಜೀವಕೋಶಗಳು ಸಾಯುವುದಿಲ್ಲ, ಅಂಗಾಂಗಳ ಮರು ಜೋಡಣೆ ಮಾಡುವ ಸೌಕರ್ಯ ಹಾಗೂ ಅತ್ಯಾಧುನಿಕ ಶಸ್ತ್ರ ಚಿಕಿತ್ಸಾ ಘಟಕವನ್ನು ಸರ್ಜಿ ಆಸ್ಪತ್ರೆಯು ಹೊಂದಿದೆ.

Officer Chandrasekaran commits suicide due to blackmail pressure : CID submits preliminary charge sheet ಬ್ಲ್ಯಾಕ್’ಮೇಲ್ಒ ತ್ತಡದ ಕಾರಣದಿಂದಲೇ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ : ಸಿಐಡಿಯಿಂದ ಪ್ರಾಥಮಿಕ ಆರೋಪಪಟ್ಟಿ ಸಲ್ಲಿಕೆ Previous post shimoga | ಬ್ಲ್ಯಾಕ್’ಮೇಲ್, ಒತ್ತಡದಿಂದಲೇ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ : CID ಪ್ರಾಥಮಿಕ ಆರೋಪಪಟ್ಟಿ ಸಲ್ಲಿಕೆ
Next post sagara | ಈಜಲು ತೆರಳಿದ ಬೆಂಗಳೂರಿನ ವಿದ್ಯಾರ್ಥಿ ನೀರುಪಾಲು!