hosanagara | ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆಯ ಮಾಂಗಲ್ಯ ಸರ ಅಪಹರಿಸಿದ ಕಳ್ಳ!

The thief entered Anganwadi and snatched the workers Mangala sutra! ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆಯ ಮಾಂಗಲ್ಯ ಸರ ಅಪಹರಿಸಿದ ಕಳ್ಳ!

ಹೊಸನಗರ (hosanagara), ಆ. 25: ಅಂಗನವಾಡಿ ಕೇಂದ್ರಕ್ಕೆ ನುಗ್ಗಿದ ಸರಗಳ್ಳನೋರ್ವ (chain snatcher), ಕಾರ್ಯಕರ್ತೆಯ ಮಾಂಗಲ್ಯ ಸರ ಅಪಹರಿಸಿ ಪರಾರಿಯಾದ ಘಟನೆ, ಶಿವಮೊಗ್ಗ ಜಿಲ್ಲೆ ಹೊಸನಗರ (hosanagara) ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಬ್ಬೈಲು ಗ್ರಾಮದಲ್ಲಿ ನಡೆದಿದೆ.

ಮಿನಿ ಅಂಗನವಾಡಿ ಕಾರ್ಯಕರ್ತೆ (anganwadi worker) ತಾರಾಮತಿ ಎಂಬುವರೇ ಮಾಂಗಲ್ಯ ಸರ (mangal sutra) ಕಳೆದುಕೊಂಡ ಅಂಗನವಾಡಿ ಕಾರ್ಯಕರ್ತೆ ಎಂದು ಗುರುತಿಸಲಾಗಿದೆ. ಕಳುವಾದ ಮಾಂಗಲ್ಯ ಸರ 42 ಗ್ರಾಂ ತೂಕದ್ದಾಗಿದ್ದು, 3.20 ಲಕ್ಷ ರೂ. ಮೌಲ್ಯದ್ದೆಂದು ಅಂದಾಜಿಸಲಾಗಿದೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ : ಆ. 22 ರ ಸಂಜೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು, ನೀಲಿ ಜರ್ಕಿನ್ ಹಾಕಿಕೊಂಡಿದ್ದ ದುಷ್ಕರ್ಮಿ ಅಂಗನವಾಡಿಗೆ (anganwadi) ನುಗ್ಗಿದ್ದಾನೆ. ನಂತರ ಕಾರ್ಯಕರ್ತೆಗೆ ಬೆದರಿಕೆ ಹಾಕಿ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾನೆ.

ಹೊಸನಗರ ತಾಲೂಕಿನ (hosanagara taluk) ಹಲವೆಡೆ ಅಂಗನವಾಡಿ ಹಾಗೂ ಮಿನಿ ಅಂಗನವಾಡಿ ಕೇಂದ್ರಗಳು, ಗ್ರಾಮಗಳ ಹೊರವಲಯದ ನಿರ್ಜನ ಪ್ರದೇಶಗಳಲ್ಲಿ ನಡೆಯುತ್ತಿವೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →