shimoga | ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಮುನ್ಸೂಚನೆ!

shimoga | Heavy rain is possible in Shimoga district : Yellow alert forecast! ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಮುನ್ಸೂಚನೆ!

ಶಿವಮೊಗ್ಗ (shivamogga), ಆ. 26: ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮುಂಗಾರು ಮಳೆ (monsoon rain) ಚುರುಕುಗೊಂಡಿದೆ. ಈ ನಡುವೆ ಮುಂದಿನ 24 ಗಂಟೆಗಳ ಅವಧಿಯಲ್ಲಿ, ಜಿಲ್ಲೆಯ ವಿವಿಧೆಡೆ ಭಾರೀ ಮಳೆಯಾಗುವ (heavy rainfall) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

6 ರಿಂದ 11 ಸೆಂಟಿ ಮೀಟರ್ ನಷ್ಟು ಮಳೆ ಸಾಧ್ಯತೆಯಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆಯು (meteorological department), ಈ ಸಂಬಂಧ ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ (yellow alert) ಮುನ್ಸೂಚನೆ ನೀಡಿದೆ.

ಇತ್ತೀಚೆಗೆ ಜಿಲ್ಲೆಯಲ್ಲಿ ಮುಂಗಾರು ಮಳೆಯ (rain) ಪ್ರಮಾಣ ಕಡಿಮೆಯಾಗಿತ್ತು. ಉಕ್ಕಿ ಹರಿಯುತ್ತಿದ್ದ ಕೆರೆಕಟ್ಟೆ, ಹಳ್ಳಕೊಳ್ಳಗಳು ಸಹಜ ಸ್ಥಿತಿಗೆ ಮರಳಿದ್ದವು. ಇದೀಗ ಮತ್ತೆ ವರ್ಷಧಾರೆ ಚುರುಕುಗೊಂಡಿದೆ. ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಇದು ನಾಗರೀಕರನ್ನು ಕಂಗೆಡಿಸುವಂತೆ ಮಾಡಿದೆ.

ಸದ್ಯ ಬೀಳುತ್ತಿರುವ ಮಳೆಯು, ಮೆಕ್ಕೆಜೋಳ (maize) ಬೆಳೆಗಾರರ ನಿದ್ದೆಗಡುವಂತೆ ಮಾಡಿದೆ. ಜುಲೈ ತಿಂಗಳ ಮಳೆಗೆ ಜಿಲ್ಲೆಯ ಹಲವೆಡೆ ಮೆಕ್ಕೆಜೋಳ ಬೆಳೆ (maize crop) ಸಂಪೂರ್ಣ ಹಾಳಾಗಿತ್ತು. ಇದೀಗ ಮತ್ತೆ ಮಳೆಯಾಗುತ್ತಿರುವುದರಿಂದ ಅಳಿದುಳಿದ ಫಸಲು ನಷ್ಟವಾಗುವ ಆತಂಕ ರೈತರದ್ದಾಗಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →