sagara | ಬ್ಯಾಂಕ್ ನೋಟಿಸ್, ಬೆಳೆ ನಷ್ಟ : ಆತ್ಮಹತ್ಯೆಗೆ ಶರಣಾದ ರೈತ!

Bank notice, crop loss: Farmer committed suicide! ಬ್ಯಾಂಕ್ ನೋಟಿಸ್, ಬೆಳೆ ನಷ್ಟ : ಆತ್ಮಹತ್ಯೆಗೆ ಶರಣಾದ ರೈತ!

ಸಾಗರ (sagara), ಆ. 27: ತೋಟದ ಕೃಷಿ ಹೊಂಡಕ್ಕೆ ಹಾರಿ ರೈತರೋರ್ವರು ಆತ್ಮಹತ್ಯೆ (farmer suicide) ಗೆ ಶರಣಾದ ಘಟನೆ, ಸಾಗರ ತಾಲೂಕಿನ ಕಾರ್ಗಲ್ (kargal) ಸಮೀಪದ ಕುದರೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೈನೆಮನೆ ಗ್ರಾಮದಲ್ಲಿ ನಡೆದಿದೆ.

ಅಶೋಕ (44) ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ. ಅಶೋಕ್ ಅವರಿಗೆ 2 ಎಕರೆ ಅಡಕೆ ತೋಟವಿದೆ . ಭಾರೀ ಮಳೆಯಿಂದ (heavy rainfall) ಕೊಳೆ  ರೋಗ ಕಾಣಿಸಿಕೊಂಡು ಬೆಳೆ ನಷ್ಟವಾಗಿತ್ತು.

ಕೃಷಿ ಉದ್ದೇಶಕ್ಕಾಗಿ ರಾಷ್ಟ್ರೀಕೃತ ಬ್ಯಾಂಕ್ ವೊಂದರಲ್ಲಿ ಸಾಲ (bank loan) ಮಾಡಿದ್ದು, ಸಕಾಲದಲ್ಲಿ ಮರು ಪಾವತಿ ಸಾಧ್ಯವಾಗಿರಲಿಲ್ಲ. ಮತ್ತೊಂದೆಡೆ, ಸಾಲ ಮರುಪಾವತಿಗೆ ಸಂಬಂಧಿಸಿದಂತೆ ಬ್ಯಾಂಕ್ ನಿಂದ ನೋಟೀಸ್ (bank notice) ಬಂದಿದೆ.

ಈ ಎಲ್ಲ ಬೆಳವಣಿಗೆಗಳಿಂದ ಮನನೊಂದ ಅಶೋಕ ಅವರು, ಆ.26 ರಂದು ತಮ್ಮ ತೋಟದಲ್ಲಿದ್ದ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕಾರ್ಗಲ್ ಪೊಲೀಸ್ ಠಾಣೆ (kargal police station) ಯಲ್ಲಿ ಪ್ರಕರಣ ದಾಖಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →