shimoga | ಹೊರ ರಾಜ್ಯಗಳ ಕಾರ್ಮಿಕರ ಬಗ್ಗೆ ಮಾಹಿತಿ ಕಡ್ಡಾಯ – ಇಲ್ಲದಿದ್ದರೆ ಬೀಳುತ್ತೆ ಕೇಸ್!

shimoga | Information about out of state workers is mandatory – otherwise the case will fall! ಹೊರ ರಾಜ್ಯಗಳ ಕಾರ್ಮಿಕರ ಬಗ್ಗೆ ಮಾಹಿತಿ ಕಡ್ಡಾಯ – ಇಲ್ಲದಿದ್ದರೆ ಬೀಳುತ್ತೆ ಕೇಸ್!

ಶಿವಮೊಗ್ಗ (shivamogga), ಆ. 28: ಇತ್ತೀಚೆಗೆ ಎಲ್ಲೆಡೆ ಕೆಲಸಕಾರ್ಯಗಳಿಗೆ, ಹೊರ ರಾಜ್ಯಗಳಿಂದ ಆಗಮಿಸುವ ಕಾರ್ಮಿಕರನ್ನು (labour) ಬಳಕೆ ಮಾಡಲಾಗುತ್ತಿದೆ. ಈ ನಡುವೆ ಇಂತಹ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವ ಮುನ್ನ, ಪೊಲೀಸ್ ಠಾಣೆ ಅಥವಾ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ!

ಈ ಸಂಬಂಧ ಕಾರ್ಮಿಕ ಇಲಾಖೆ (labour department) ಆದೇಶ ಹೊರಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ವಿವರ ಈ ಮುಂದಿನಂತಿದೆ.  

ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ, ಕಟ್ಟಡ ಕಾಮಗಾರಿ (building work) ಮತ್ತಿತರ ಕೆಲಸಗಳಿಗೆ ಮೇಸ್ತ್ರಿ/ಮಾಲೀಕ/ಗುತ್ತಿಗೆದಾರರು ಹೊರ ರಾಜ್ಯದಿಂದ ಬರುವ ಕಾರ್ಮಿಕರನ್ನು (out-of-state workers) ಬಳಸಿಕೊಳ್ಳುತ್ತಿದ್ದಾರೆ. 

ಹೀಗೆ ಕೆಲಸಕ್ಕೆ ತೆಗೆದುಕೊಳ್ಳುವುದಕ್ಕೂ ಮುನ್ನ ಹೊರ ರಾಜ್ಯ ಕಾರ್ಮಿಕರ ಆಧಾರ್ ಕಾರ್ಡ್ (aadhar card) ಮತ್ತು ವಿಳಾಸವನ್ನು ಸಂಬಂಧಪಟ್ಟ ಹತ್ತಿರದ ಪೊಲೀಸ್ ಠಾಣೆ (police station) ಮತ್ತು ಕಾರ್ಮಿಕ ಇಲಾಖೆಗೆ ನೀಡಬೇಕು. ನಂತರವಷ್ಟೆ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಬೇಕು.

ತಪ್ಪಿದ್ದಲ್ಲಿ ಈ ಕಾರ್ಮಿಕರುಗಳಿಂದ ಯಾವುದೇ ಅಹಿತಕರ ಘಟನೆ / ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದರೆ, ಕಾರ್ಮಿಕರನ್ನು ನೇಮಿಸಿಕೊಂಡಿದ್ದ ಮೇಸ್ತ್ರಿ/ ಮಾಲೀಕರು/ ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿ ವೇಣುಗೋಪಾಲ್ ಎಂ.ಪಿ. ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →