shimoga | ಶಿವಮೊಗ್ಗ – ಅಪಾರ್ಟ್’ಮೆಂಟ್ ನಲ್ಲಿ ಭಾಗಶಃ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

A woman's body was found in a partially decomposed state ಶಿವಮೊಗ್ಗ | ಅಪಾರ್ಟ್’ಮೆಂಟ್ ನಲ್ಲಿ ಭಾಗಶಃ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ!

ಶಿವಮೊಗ್ಗ (shivamogga), ಸೆ. 5 : ಅಪಾರ್ಟ್’ಮೆಂಟ್ (apartment) ವೊಂದರಲ್ಲಿ ಭಾಗಶಃ ಕೊಳೆತ ಸ್ಥಿತಿಯಲ್ಲಿ, ಮಹಿಳೆಯೋರ್ವರ ಶವ ಪತ್ತೆಯಾದ ಘಟನೆ, ಶಿವಮೊಗ್ಗ ನಗರದ ಗೋಪಾಳ ಬಡಾವಣೆ (goapala extension) ಯಲ್ಲಿ ನಡೆದಿದೆ.

ಸುಧಾ (48) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಇವರು ತಂಗಿದ್ದ ಅಪಾರ್ಟ್’ಮೆಂಟ್ ಮನೆ ಬಾಗಿಲಿಗೆ, ಒಳಗಿನಿಂದ ಚಿಲಕ ಹಾಕಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯಿಂದ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ, ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಮುರಿದು ಪರಿಶೀಲಿಸಿದಾಗ, ಮನೆಯ ಬಾತ್ ರೂಂನಲ್ಲಿ ಭಾಗಶಃ ಕೊಳತೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ (woman’s body was found in a partially decomposed state) ಯಾಗಿದೆ.

ಸುಧಾರವರು ವಿವಾಹಿತರಾಗಿದ್ದು, ಪತಿ ತೊರೆದಿದ್ದರು. ಅಪಾರ್ಟ್’ಮೆಂಟ್ ನಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಇವರ ಪುತ್ರ ಬೋರ್ಡಿಂಗ್ ಶಾಲೆಯೊಂದರಲ್ಲಿ ಅಭ್ಯಾಸ ಮಾಡುತ್ತಿದ್ದಾನೆ ಎನ್ನಲಾಗಿದೆ.

ಸುಧಾರವರು ಏಕಾಂಗಿಯಾಗಿ  ನೆಲೆಸಿದ್ದರು. ಅವರ ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಇನ್ಸ್’ಪೆಕ್ಟರ್ (inspector) ಕೆ.ಟಿ.ಗುರುರಾಜ್ ಅವರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆ (tunga nagara police station) ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →