ಡಿಸಿಸಿ ಬ್ಯಾಂಕ್ ನೇಮಕಾತಿ : ವೆಬ್‌ಸೈಟ್ ನಲ್ಲಿ ಫಲಿತಾಂಶ ಪ್ರಕಟ

ಶಿವಮೊಗ್ಗ, ಮಾ. 6: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿದ್ದ ಹುದ್ದೆಗಳ ನೇಮಕಾತಿಗೆ ನಡೆಸಿದ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿದೆ.

ಕಿರಿಯ ಸಹಾಯಕರು/ನಗದು ಗುಮಾಸ್ತರು/ಕ್ಷೇತ್ರಾಧಿಕಾರಿಗಳು, ಅಟೆಂಡರ್, ವಾಹನ ಚಾಲಕರು ಹಾಗೂ ಜಲಗಾರರ ಹುದ್ದೆಯ ನೇಮಕಾತಿಯ ಫಲಿತಾಂಶವನ್ನು 06-03-2023 ರಂದು ಬ್ಯಾಂಕ್ ನ ವೆಬ್‍ಸೈಟ್ www.shimogadccbank.com ಪ್ರಕಟಿಸಲಾಗಿದೆ ಎಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *