ಸಿಗಂದೂರು ಸೇತುವೆ ಉದ್ಘಾಟನೆ ಯಾವಾಗ? ಸಂಸದರು ಹೇಳಿದ್ದೇನು?

Sagara | Sagar - Sigandur Bridge Inauguration When? What did the MP say? ಸಿಗಂದೂರು ಸೇತುವೆ ಉದ್ಘಾಟನೆ ಯಾವಾಗ? ಸಂಸದರು ಹೇಳಿದ್ದೇನು?

ಸಾಗರ (sagara), ಸೆ. 12: ಸಾಗರ ತಾಲೂಕಿನ ಶರಾವತಿ ಹಿನ್ನೀರು (sharavati back water) ಪ್ರದೇಶದ ಅಂಬಾರಗೊಡ್ಲು – ಕಳಸವಳ್ಳಿ ನಡುವೆ ನಿರ್ಮಿಸಲಾಗುತ್ತಿರುವ ಸೇತುವೆ (siganduru bridge) ಕಾಮಗಾರಿ ಬಿರುಸುಗೊಂಡಿದ್ದು, ಎಲ್ಲ ಅಂದುಕೊಂಡಂತೆ ನಡೆದರೆ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಜನ – ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳುವ ಸಾಧ್ಯತೆಯಿದೆ.

ಈ ನಡುವೆ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ (mp b y raghavendra) ಅವರು ಕಳೆದ ಮಂಗಳವಾರ ಸೇತುವೆ ಕಾಮಗಾರಿ ವೀಕ್ಷಣೆ ನಡೆಸಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಕ್ಕೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.

ಅಂಬಾರಗೊಡ್ಲು – ಕಳಸವಳ್ಳಿ (ambaragodlu – kalasavalli) ಸೇತುವೆಯು ಅತ್ಯಂತ ಮಹತ್ವದ್ದಾಗಿದ್ದು, ಐತಿಹಾಸಿಕ ಮೈಲುಗಲ್ಲಾಗಿದೆ. ಈ ಭಾಗದ ನಾಗರೀಕರ ಹಲವು ದಶಕಗಳ ಬೇಡಿಕೆಯಾಗಿದೆ. ಶರಾವತಿ ಮುಳುಗಡೆ ಸಂತ್ರಸ್ತರ ತ್ಯಾಗಕ್ಕೆ ಪ್ರತಿಫಲ ಸಿಕ್ಕಂತಾಗುತ್ತದೆ ಎಂದು ಸಂಸದರು ತಿಳಿಸಿದ್ದಾರೆ.

ಸೇತುವೆ (bridge) ನಿರ್ಮಾಣದಿಂದ ಸಿಗಂದೂರು ಕ್ಷೇತ್ರಕ್ಕೆ (siganduru temple) ಆಗಮಿಸುವ ಭಕ್ತರಿಗೆ ಸಾಕಷ್ಟು ಅನುಕೂಲವಾಗಲಿದೆ. ಈ ಭಾಗದ ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾಗಲಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಈ ಭಾಗದ ಗ್ರಾಮಗಳ ಜನರ ಸುಲಭ ಸಂಚಾರಕ್ಕೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಕಾಮಗಾರಿ ಬಿರುಸು : ಅಂಬಾರಗೊಡ್ಲು – ಕಳಸವಳ್ಳಿ (ambaragodlu – kalasavalli) ನಡುವೆ ಸರಿಸುಮಾರು 423 ಕೋಟಿ ರೂ. ವೆಚ್ಚದಲ್ಲಿ, 2. 25 ಕಿ.ಮೀ. ಉದ್ದದ ಕೇಬಲ್ ಆಧಾರಿತ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಕಳೆದ ವರ್ಷವೇ ಕಾಮಗಾರಿ ಪೂರ್ಣಗೊಳ್ಳಬೇಕಾಗಿತ್ತು. ಆದರೆ ನಾನಾ ಕಾರಣಗಳಿಂದ ಕಾಮಗಾರಿ ವಿಳಂಬವಾಗಿತ್ತು.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →