ಹೊಸನಗರ / ತೀರ್ಥಹಳ್ಳಿ, ಸೆ. 27: ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನಲ್ಲಿ ಸೆ. 26 ರಂದು ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಅಂದರ್ – ಬಾಹರ್ ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿ, ಒಟ್ಟಾರೆ 18 ಜನರನ್ನು ಬಂಧಿಸಿದ ಘಟನೆ ನಡೆದಿದೆ.
ಹೊಸನಗರ ವರದಿ : ತಾಲೂಕಿನ ಮಾರುತಿಪುರ ಗ್ರಾಮದ ಹಳೇ ಬಾಣಿಗ ರಸ್ತೆಯ ಬಳಿ ಹಣ ಪಣಕ್ಕಿಟ್ಟು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇರೆಗೆ, 11 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರಿಂದ 17,640 ರೂ.ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೀರ್ಥಹಳ್ಳಿ ವರದಿ : ತಾಲೂಕಿನ ಮುಳಬಾಗಿಲು ಗ್ರಾಮದ ಸರ್ಕಾರಿ ಪ್ಲ್ಯಾಂಟೇಷನ್ ನಲ್ಲಿ ಅಂದರ್ – ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಖಚಿತ ವರ್ತಮಾನದ ಮೇರೆಗೆ, ಪೊಲೀಸರು ದಾಳಿ ನಡೆಸಿ 7 ಜನರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಜೂಜಾಟಕ್ಕೆ ಬಳಸಿದ್ದ 13 ಸಾವಿರ ನಗದು, ಇಸ್ಪೀಟ್ ಎಲೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hosnagar / Thirthahalli : In Hosnagar and thirthahalli talukas In two separate incidents on the 26th, the police raided Andar-Bahar Ispeet gambling dens and arrested a total of 18 people.

