ಶಿವಮೊಗ್ಗ (shivamogga), ಸೆ. 30: ಅಕ್ಟೋಬರ್ 02 ರಂದು ಮಹಾತ್ಮ ಗಾಂಧಿ ಜಯಂತಿ ಆಚರಣೆ ಪ್ರಯುಕ್ತ, ಶಿವಮೊಗ್ಗ ಮಹಾನಗರ ಪಾಲಿಕೆ (shimoga city corporation limit) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.
ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು ಎಂದು ಸೆ. 30 ರಂದು ಪಾಲಿಕೆ ಆಡಳಿತ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
On the occasion of Mahatma Gandhi Jayanti celebration, animal slaughter and sale of meat is prohibited in Shimoga Municipal Corporation limit in october 02. The Commissioner of Shimoga Municipal Corporation has warned in a release that appropriate legal action will be taken against shop owners who violate the order.

