shimoga | 'Death is certain if rabies comes!': District Health Officer Dr. Nataraj warns ‘ರೇಬಿಸ್ ಬಂದರೆ ಸಾವು ಖಚಿತ!’ : ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಟರಾಜ್ ಎಚ್ಚರಿಕೆ

shimoga | ‘ರೇಬಿಸ್ ಬಂದರೆ ಸಾವು ಖಚಿತ!’ : ಶಿವಮೊಗ್ಗ DHO ಡಾ.ನಟರಾಜ್ ಎಚ್ಚರಿಕೆ

ಶಿವಮೊಗ್ಗ (shivamogga), ಅ. 1:  ರೇಬಿಸ್ ಖಾಯಿಲೆ ಬಂದರೆ ಸಾವು ಖಚಿತ. ಆದ್ದರಿಂದ ಎಲ್ಲರೂ ನಾಯಿ ಮತ್ತು ಇತರೆ ಪ್ರಾಣಿಗಳ ಕಡಿತದಿಂದ ದೂರ ಇರಬೇಕು. ಕೇವಲ ಕಡಿತ ಮಾತ್ರವಲ್ಲ ತರಚಿದ್ದರೂ ಆಂಟಿ ರೇಬಿಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಡಿಹೆಚ್‌ಓ ಡಾ.ನಟರಾಜ್ ಎಚ್ಚರಿಸಿದರು.

ಮಂಗಳವಾರ ಶಿವಮೊಗ್ಗ ನಗರದ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ವಿಶ್ವ ರೇಬಿಸ್ ದಿನ ಮತ್ತು ವಿಶ್ವ ಹೃದಯ ದಿನವನ್ಬು ಉದ್ಘಾಟಿಸಿ ಅವರು ಮಾತನಾಡಿದರು.

ನಾವೆಲ್ಲ ನಾಯಿ ಮತ್ತು ಇತರೆ ಪ್ರಾಣಿಗಳನ್ನು ಪ್ರೀತಿಸುತ್ತೇವೆ. ಅವೂ ನಮ್ಮನ್ನು ಪ್ರೀತಿಸುತ್ತವೆ. ಆದರೆ ನಾಯಿಗಳು/ಪ್ರಾಣಿಗಳು ಕೆಲವೊಮ್ಮೆ ಅಪಾಯಕಾರಿಯೂ ಆಗಿರುತ್ತವೆ. ಆದ್ದರಿಂದ ನಾವು ಸಾಕಿದ ನಾಯಿಗಳಿಗೆ ಮತ್ತು ಬೀದಿ ನಾಯಿಗಳಿಗೆ ಆಂಟಿ ರೇಬಿಸ್ ಲಸಿಕೆಯನ್ನು ನಿಯಮಿತವಾಗಿ ಕೊಡಿಸಬೇಕು.

ರೇಬಿಸ್ ಬಂದ ನಂತರ ಅದಕ್ಕೆ ಚಿಕಿತ್ಸೆ ಇಲ್ಲ. ಸಾವು ಖಚಿತ. ಆದರಿಂದ ಮುನ್ನೆಚ್ಚರಿಕೆ ಅತಿ ಅಗತ್ಯ. ನಾಯಿ, ಬೆಕ್ಕು ಇತರೆ ಪ್ರಾಣಿಗಳು ಕಡಿದರೆ, ತರಚಿದರೂ ನಿರ್ಲಕ್ಷö್ಯ ಮಾಡದೇ ಆಂಟಿ ರೇಬಿಸ್ ಲಸಿಕೆ ಪಡೆಯಬೇಕು.

ಭಾನುವಾರ ಶಿಕಾರಪುರದಲ್ಲಿ ಹುಚ್ಚು ನಾಯಿಯೊಂದು 41 ಜನರನ್ನು ಕಚ್ಚಿದೆ. ಆ ನಾಯಿ ಕಚ್ಚಿದ ಎಲ್ಲರಿಗೆ ಆಂಟಿ ರೇಬಿಸ್ ಇಮ್ಯುನೊಗ್ಲಾಬ್ಯುಲಿನ್ ಲಸಿಕೆ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 4 ಜನರು ನಾಯಿ ಕಡಿತದಿಂದ ಸಾವನ್ನಪ್ಪಿದ್ದಾರೆ  ಎಂದು ತಿಳಿಸಿದರು.

ಹೃದಯದ ಆರೋಗ್ಯಕ್ಕಾಗಿ ಒತ್ತಡ ನಿರ್ವಹಣೆ ಮಾಡಬೇಕು. ನಿಯಮಿತವಾಗಿ ವ್ಯಾಯಾಮ, ಧ್ಯಾನ, ಹಾಗೂ ಸಾಕಷ್ಟು ವಿಶ್ರಾಂತಿ ಅಗತ್ಯ. ಇತ್ತೀಚಿನ ದಿನಗಳಲ್ಲಿ ಯುವಜನತೆ ಹೃದಯಾಘಾತದಿಂದ ಹೆಚ್ಚು ಸಾವನ್ನಪ್ಪುತ್ತಿದ್ದು, ಉತ್ತಮ ಜೀವನ ಶೈಲಿ , ಆಹಾರ ಕ್ರಮ, ಹವ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಮೆಗ್ಗಾನ್ ಬೋಧನಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್ ಮಾತನಾಡಿ, ನಾವು ನಾಯಿ ಕಡಿತದಿಂದ ದೂರ ಇರಬೇಕು. ಬೆಕ್ಕು ಕಡಿತದಿಂದಲೂ ಎರಡು ಸಾವಾಗಿದೆ. ಆದ್ದರಿಂದ ರೇಬಿಸ್ ಖಾಲಿಯೆ ಬಗ್ಗೆ ಜಾಗೃತರಾಗಿರಬೇಕು. ರೇಬಿಸ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು.

 ಇತ್ತೀಚೆಗೆ ಹೃದಯ ಸಂಬಂಧಿ ಕಾಯಿಲೆಗಳು ಮೊದಲನೇ ಸ್ಥಾನದಲ್ಲಿದೆ. ಆಹಾರವನ್ನ ಔಷಧಿ ರೀತಿಯಲ್ಲಿ ತಗೋಬೇಕು. ಎಲ್ಲರೊಂದಿಗೆ ಉತ್ತಮ ಬಾಂಧವ್ಯ, ಉತ್ತಮ ಜೀವನ ಶೈಲಿ ಅಳವಡಿಕೊಳ್ಳಬೇಕು. ಫಾಸ್ಟ್ ಫುಡ್‌ನಲ್ಲಿರುವ ಟ್ರಾನ್ಸ್ಫ್ಯಾಟ್ ತುಂಬಾ ಅಪಾಯಕಾರಿಯಾಗಿದ್ದು ಇದರಿಂದ ದೂರ ಇರಬೇಕು ಎಂದರು.

ಸರ್ಕಾರಿ ಮೆಗ್ಗಾನ್ ಬೋಧನಾ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರಾದ ಡಾ. ತಿಮ್ಮಪ್ಪ ಅವರು ಮಾತನಾಡಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ  ಕಾಯಿಲೆಗಳಿಗೆ ಉತ್ತಮ ಚಿಕಿತ್ಸೆ, ಸೌಲಭ್ಯಗಳು ಲಭ್ಯವಿದೆ. ಸುಸಜ್ಜಿತವಾದ ಕಾರ್ಡಿಯಾಲಜಿ ವಿಭಾಗ ಕೆಲಸ ನಿರ್ವಹಿಸುತ್ತಿದೆ. ಇದುವರೆಗೆ 2900 ಆಂಜಿಯೋಗ್ರಾಮ್, 900 ಆಂಜಿಯೊಪ್ಲಾಸ್ಟಿ ಚಿಕಿತ್ಸೆ ನೀಡಲಾಗಿದೆ.

ಎಬಿಎಆರ್‌ಕೆ ಮತ್ತು ಬಿಪಿಎಲ್ ಕಾರ್ಡು ಹೊಂದಿದವರಿಗೆ ಉಚಿತ ಚಿಕಿತ್ಸೆ ಲಭ್ಯವಿದೆ. 20 ಕಾರ್ಡಿಯಾಕ್ ಬೆಡ್ ಸೌಲಭ್ಯವಿದೆ. ಸಾಮಾನ್ಯ ವರ್ಗದವರಿಗೆ ಸಿಂಗಲ್ ಸ್ಟಂಟ್ ಅಳವಡಿಸಲು ರೂ.88,000/- ಡಬಲ್ 1,28,000 ಮತ್ತು ತ್ರಿಬಲ್ ಸ್ಟಂಟ್ ಅಳವಡಿಕೆಗೆ ರೂ. 1,48,000 ಆಗುತ್ತದೆ  ಎಂದು ಹೇಳಿದರು.

ಆರ್‌ಸಿಹೆಚ್‌ಓ ಡಾ.ಓ.ಮಲ್ಲಪ್ಪ ಮಾತನಾಡಿ, ರೇಬಿಸ್ ಬಂದ ಮೇಲೆ ಬದುಕಲು ಸಾಧ್ಯವಿಲ್ಲ. ನಾಯಿ ಕಡಿತ ಆದ ತಕ್ಷಣ ನಿರ್ಲಕ್ಷಿಸದೇ ಲಸಿಕೆ ಪಡೆಯಬೇಕು. 28 ದಿನದಲ್ಲಿ 4 ಡೋಸ್‌ಗಳನ್ನು ಪಡೆಯಲೇಬೇಕು. ವರ್ಷದಲ್ಲಿ 25 ರಿಂದ 30 ಸಾವಿರ ನಾಯಿ ಕಡಿತ ಪ್ರಕರಣ ಸಂಭವಿಸುತ್ತದೆ. ಆದ್ದರಿಂದ ಜನರು ಎಚ್ಚರಿಕೆಯಿಂದ ಇರಬೇಕು. ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು.

ರೇಬಿಸ್ ಖಾಯಿಲೆ ಬಂದ ಎರಡು ಮೂರು ದಿನದಲ್ಲಿ ರೋಗಿ ಸಾಯುತ್ತಾನೆ. ಯಾವುದೇ ಪ್ರಾಣಿ ಕಚ್ಚಿದರೂ ರೇಬಿಸ್ ಬರಬಹುದು. ಶೇ. 97 ರಷ್ಟು ನಾಯಿ ಕಡಿತದಿಂದ ಬಂದರೆ ಶೇ. 3 ರಷ್ಟು ಬೆಕ್ಕು, ಕಾಡು ಪ್ರಾಣಿ ಕಚ್ಚುವಿಕೆಯಿಂದ ಬರುತ್ತದೆ. ಜನರಲ್ಲಿ, ನಾಯಿ ಮಾಲೀಕರಲ್ಲಿ ಈ ಬಗ್ಗೆ ಅರಿವು ಹೆಚ್ಚಬೇಕು ಎಂದು ಮಾಹಿತಿ ನೀಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜ್ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಜನರಲ್ಲಿ ರೇಬಿಸ್ ಕಾಯಿಲೆಯ ಬಗ್ಗೆ ಮಾಹಿತಿ ನೀಡಿ ಜಾಗೃತಗೊಳಿಸುವುದು ವಿಶ್ವ ರೇಬಿಸ್ ದಿನಾಚರಣೆ ಉದ್ದೇಶವಾಗಿದೆ. ಆಂಟಿ ರೇಬಿಸ್ ಲಸಿಕೆ ಕಂಡು ಹಿಡಿದ ಲೂಯಿಸ್ ಪಾಶ್ಚರ್ ಸ್ಮರಣಾರ್ಥ ಸೆ.28 ರಂದು ಪ್ರತಿ ವರ್ಷ ವಿಶ್ವ ರೇಬಿಸ್ ದಿನ ಆಚರಿಸಲಾಗುತ್ತದೆ. ರೇಬಿಸ್ ವೈರಸ್ ಹೊಂದಿದ ನಾಯಿ ಕಚ್ಚಿದರೆ ಆಂಟಿ ರೇಬಿಸ್ ಲಸಿಕೆ ತೆಗೆದುಕೊಳ್ಳಬೇಕು.

ಇಲ್ಲವಾದಲ್ಲಿ ಸಾವು ಸಂಭವಿಸುತ್ತದೆ. ಈ ವರ್ಷ ಜಿಲ್ಲೆಯಲ್ಲಿ 17000 ಕ್ಕು ಹೆಚ್ಚು ನಾಯಿ ಕಡಿತ ಪ್ರಕರಣ ದಾಖಲಾಗಿದ್ದು, ಕಡ್ಡಾಯವಾಗಿ ಟಿಟಿ ಮತ್ತು ಆಂಟಿ ರೇಬಿಸ್ ಲಸಿಕೆ ಪಡೆಯಬೇಕು. ಹಾಗೂ ಈ ಬಗ್ಗೆ ಎಲ್ಲರಲ್ಲಿ ಜಾಗೃತಿ ಮೂಡಿಸಬೇಂದರು.

 ಇತ್ತೀಚಿನ ದಿನಗಳಲ್ಲಿ 30 ರಿಂದ 40 ರೊಳಗಿನ ಯುವಜನತೆ ಹೃದಯಾಘಾತಕ್ಕೆ ಹೆಚ್ಚು ಬಲಿಯಾಗುತ್ತಿದ್ದು, ಜೀವನ ಶೈಲಿ ಬದಲಾವಣೆ ಅಗತ್ಯವಿದೆ. ಧೂಮಪಾನ, ಒತ್ತಡದಿಂದ ದೂರ ಇರಬೇಕು. ನಿಯಮಿತವಾಗಿ ವ್ಯಾಯಾಮ ಮಾಡಬೇಕು ಹೃದಯಕ್ಕೆ ಸಂಬAಧಿಸಿದ ಯಾವುದೇ ಖಾಯಿಲೆ ಲಕ್ಷಣ ಕಂಡು ಬಂದ ತಕ್ಷಣ ಆಸ್ಪತ್ರೆಗೆ ಬರಬೇಕು. ತಮ್ಮ ಹೃದಯಕ್ಕಾಗಿ ಪ್ರತಿ ದಿನ ಒಂದು ಗಂಟೆ ವಾಕ್ ಮಾಡಬೇಕೆಂದರು.

 ಡಾ.ಹರ್ಷವರ್ಧನ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾತನಾಡಿದರು. ಐಎಂಎ ಅಧ್ಯಕ್ಷ ಡಾ.ಶ್ರೀಧರ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ದಿನೇಶ್, ತಾಲ್ಲೂಕು ವೈದ್ಯಾಧಿಕಾರಿ  ಡಾ. ಚಂದ್ರಶೇಖರ್, ನಂಜಪ್ಪ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Shimoga : Death is certain if you get rabies disease. So everyone should stay away from dog and other animal bites. DHO Dr. Nataraj warned that anti-rabies vaccination should be compulsorily obtained even if it is not only a bite but also a scratch. He spoke while inaugurating World Rabies Day and World Heart Day organized at Nanjappa Life Care Hospital in Shimoga on Tuesday.

A new system will be implemented in the offices of the sub-registrar of Shimoga district : Real estate registration will fall to irregularities! ಶಿವಮೊಗ್ಗ ಜಿಲ್ಲೆಯ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಜಾರಿಯಾಗಲಿದೆ ಹೊಸ ವ್ಯವಸ್ಥೆ : ಸ್ಥಿರಾಸ್ತಿ ನೊಂದಣಿ ಅಕ್ರಮಗಳಿಗೆ ಬೀಳಲಿದೆ ಕಡಿವಾಣ! Previous post shimoga | ಶಿವಮೊಗ್ಗ ಜಿಲ್ಲೆಯಲ್ಲಿ ಜಾರಿಯಾಗಲಿದೆ ಹೊಸ ವ್ಯವಸ್ಥೆ : ಸ್ಥಿರಾಸ್ತಿ ನೊಂದಣಿ ಅಕ್ರಮಗಳಿಗೆ ಬೀಳಲಿದೆ ಕಡಿವಾಣ!
Shimoga : The body of an anonymous man was found in the channel water! ಶಿವಮೊಗ್ಗ : ಚಾನಲ್ ನೀರಿನಲ್ಲಿ ಅನಾಮಧೇಯ ಪುರುಷನ ಶವ ಪತ್ತೆ! Next post shimoga | ಶಿವಮೊಗ್ಗ : ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಪುರುಷರ ಶವಗಳು ಪತ್ತೆ!