CM Siddaramaiah says BJP-JDS are not satisfied due to implementation of guarantee ಗ್ಯಾರಂಟಿ ಜಾರಿಯಿಂದಾಗಿ ಬಿಜೆಪಿ - ಜೆಡಿಎಸ್ ಗೆ ಸಮಾಧಾನವಿಲ್ಲದಂತಾಗಿದೆ - ಸಿಎಂ ಸಿದ್ದರಾಮಯ್ಯ

ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆಯಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ. 31- ‘ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ’  ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.

ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು  ನೀಡಿದ್ದಾರೆ. ಅವರದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು  ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ನವೆಂಬರ್ 4ರ ಅವರ ಪ್ರತಿಭಟನೆ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆಡೆ ‌ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ  ಮಾಡಿಲ್ಲವೇ? ಎಂದು ಪ್ರಶ್ನಿಸಿದರು.

ಶಿಗ್ಗಾಂವಿಯಲ್ಲಿ ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ವಾಪಸ್ ಪಡೆದಿದ್ದು, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ.

ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರೂ ಕ್ಷೇತ್ರಗಳಲ್ಲಿಯೂ ಗೆಲುವು ನಮ್ಮದೇ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಶುಭಾಶಯಗಳನ್ನು  ತಿಳಿಸಿದರು.

Interim bail for actor Darshan: What is the reason? ಚಿತ್ರನಟ ದರ್ಶನ್ ಗೆ ಮಧ್ಯಂತರ ಜಾಮೀನು : ಕಾರಣವೇನು? Previous post actor darshan | ಚಿತ್ರನಟ ದರ್ಶನ್ ಗೆ ಮಧ್ಯಂತರ ಜಾಮೀನು : ಕಾರಣವೇನು?
The tragic end of a 2-year-old who was injured by hot tea falling on me! Next post hosanagara news | ಮೈಮೇಲೆ ಬಿಸಿ ಟೀ ಬಿದ್ದು ಗಾಯಗೊಂಡಿದ್ದ 2 ವರ್ಷದ ಪುಟಾಣಿಯ ದಾರುಣ ಅಂತ್ಯ..!