shimoga | ಶಿವಮೊಗ್ಗ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ : ಮೀಟರ್ ಹಾಕದ ಆಟೋ ಚಾಲಕರ ವಿರುದ್ದ ಕೇಸ್!
ಶಿವಮೊಗ್ಗ (shivamogga), ನ. 8: ಶಿವಮೊಗ್ಗ ನಗರದಲ್ಲಿ ಕೆಲ ಆಟೋ ಚಾಲಕರು, ಮೀಟರ್ ಹಾಕದೆ ಪ್ರಯಾಣಿಕರಿಂದ ದುಬಾರಿ ಹಣ ವಸೂಲಿ ಮಾಡುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ, ಟ್ರಾಫಿಕ್ ಠಾಣೆಗಳ ಪೊಲೀಸರು ನಗರದ ವಿವಿಧೆಡೆ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ ಘಟನೆ ನ. 7 ರಂದು ನಡೆದಿದೆ.
ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಆಟೋಗಳನ್ನು ಟ್ರಾಫಿಕ್ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೀಟರ್ ಹಾಕದೆ ಆಟೋ ಚಲಾಯಿಸುತ್ತಿದ್ದವರನ್ನು ಪತ್ತೆ ಹಚ್ಚಿದ್ದಾರೆ.
ಐಎಂಎ ಕಾಯ್ದೆಯಡಿ 100 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಜೊತೆಗೆ 20 ಆಟೋಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆಯು ನ. 8 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಎಸ್ಪಿ ಜಿ ಕೆ ಮಿಥುನ್ ಕುಮಾರ್, ಎಎಸ್ಪಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪ ಎ ಜಿ, ಡಿವೈಎಸ್ಪಿ ಸುರೇಶ್ ಮಾರ್ಗದರ್ಶನದಲ್ಲಿ ಟ್ರಾಫಿಕ್ ಸರ್ಕಲ್ ಇನ್ಸ್’ಪೆಕ್ಟರ್ ಸಂತೋಷ್ ಕುಮಾರ್ ನೇತೃತ್ವದಲ್ಲಿ ಪೂರ್ವ ಹಾಗೂ ಪಶ್ಚಿಮ ಸಂಚಾರಿ ಠಾಣೆಗಳ ಪೊಲೀಸರು ವಿಶೇಷ ತಪಾಸಣಾ ಕಾರ್ಯದಲ್ಲಿ ಭಾಗಿಯಾಗಿದ್ದರು.
ಆಟೋ ಚಾಲಕರು ಕಡ್ಡಾಯವಾಗಿ ಆಟೋಗಳ ಮೀಟರ್ ಅಳವಡಿಕೆ ಮಾಡಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರವು ಅಗತ್ಯವಾಗಿದೆ. ಮೀಟರ್ ಹಾಕದೆ ಆಟೋ ಚಲಾಯಿಸುವ ಚಾಲಕರ ಬಗ್ಗೆ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.
In the wake of allegations that some auto drivers in Shimoga city are collecting expensive money from passengers without putting meters, the police of traffic stations conducted a special inspection operation in different parts of the city on November 7.
