ಬೈಕ್’ಗಳ ಕಳವು ಪ್ರಕರಣ – ಶಿವಮೊಗ್ಗ ಪೊಲೀಸರ ಕಾರ್ಯಾಚರಣೆ : ಭದ್ರಾವತಿಯ ಮೂವರು ಆರೋಪಿಗಳು ಅರೆಸ್ಟ್!

ಬೈಕ್’ಗಳ ಕಳವು – ಶಿವಮೊಗ್ಗ ಪೊಲೀಸರ ಕಾರ್ಯಾಚರಣೆ : ಭದ್ರಾವತಿಯ ಮೂವರು ಆರೋಪಿಗಳು ಅರೆಸ್ಟ್!

ಶಿವಮೊಗ್ಗ (shivamogga), ನ. 24: ವಿವಿಧೆಡೆ ಬೈಕ್ ಕಳವು ಮಾಡುತ್ತಿದ್ದ ಆರೋಪದ ಮೇರೆಗೆ ಭದ್ರಾವತಿಯ ಮೂವರು ಆರೋಪಿಗಳನ್ನು, ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ನ. 22 ರಂದು ನಡೆದಿದೆ.

ಭದ್ರಾವತಿಯ ಸೀತಾಪುರದ ನಿವಾಸಿಗಳಾದ ಮೆಕಾನಿಕ್ ಕೆಲಸ ಮಾಡುವ ಇ್ರಮಾನ್ ಯಾನೆ ಇಮ್ಮು (26), ವುಡ್ ವರ್ಕ್ ಕೆಲಸ ಮಾಡುವ ಮದನ್ ಕುಮಾರ್ ಯಾನೆ ಗುಂಡಾ (18) ಹಾಗೂ ಗಾರೆ ಕೆಲಸ ಮಾಡುವ ಹರೀಶ್ ಎನ್ (18) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಬಂಧಿತರಿಂದ 4 ಪಲ್ಸರ್, 1 ಅಪಾಚೆ, 1 ಸ್ಪ್ಲೆಂಡರ್ ಮತ್ತು 1 ರಾಯಲ್ ಎನ್ ಫೀಲ್ಡ್ ಸೇರಿದಂತೆ ಒಟ್ಟಾರೆ 7 ಬೈಕ್ ವಶಕ್ಕೆ ಪಡೆಯಲಾಗಿದೆ. ಇವುಗಳ ಮೌಲ್ಯ 9. 40 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.

ಆರೋಪಿಗಳ ಬಂಧನದಿಂದ ಭದ್ರಾವತಿ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ 3 ಪ್ರಕರಣ, ಶಿಕಾರಿಪುರ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 2, ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ1 ಹಾಗೂ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 1 ಪ್ರಕರಣ ಬೆಳಕಿಗೆ ಬಂದಿದೆ.

ಸಿಕ್ಕಿ ಬಿದ್ದಿದ್ದು ಹೇಗೆ? : ನ. 22 ರಂದು ಬೆಳಿಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪುರಲೆ ಗ್ರಾಮದ ಸುಬ್ಬಯ್ಯ ಮೆಡಿಕಲ್ ಕಾಲೇಜ್  ಹಿಂಭಾಗದ ಬೈಪಾಸ್ ರಸ್ತೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಹೆಚ್.ಸಿ.ವೆಂಕಟೇಶ್, ರಾಘವೇಂದ್ರ, ಕವನ್, ಕಾಶೀನಾಥ್, ಗಣೇಶ್, ಶ್ರೀಕಾಂತ್ ಮತ್ತು ಬಸವರಾಜ್ ದನುವಿನ ಮನಿರವರು ಗಸ್ತಿನಲ್ಲಿದ್ದರು.

ಈ ವೇಳೆ ಬಂಧಿತ ಮೂವರು ಆರೋಪಿಗಳು ಅನುನಾನಾಸ್ಪದವಾಗಿ ಎರಡು ಬೈಕ್ ಗಳನ್ನು ನಿಲ್ಲಿಸಿಕೊಂಡು ನಿಂತಿದ್ದರು. ಗಸ್ತಿನಲ್ಲಿದ್ದ ಸಿಬ್ಬಂದಿಗಳು ಸದರಿ ಆರೋಪಿಗಳನ್ನು ವಶಕ್ಕೆ ಪಡೆದು ಇನ್ಸ್’ಪೆಕ್ಟರ್ ಸತ್ಯನಾರಾಯಣ ಅವರ ಮುಂದೆ ಹಾಜರುಪಡಿಸಿದ್ದರು.

ಆರೋಪಿಗಳನ್ನು ಕೂಲಂಕಷವಾಗಿ ವಿಚಾರಣೆಗೊಳಪಡಿಸಿದ ವೇಳೆ ಶಿಕಾರಿಪುರ ಪಟ್ಟಣದಲ್ಲಿ ಎರಡು ಬೈಕ್ ಕಳವು ಮಾಡಿದ್ದಾಗಿ ತಿಳಿಸಿದ್ದಾರೆ. ಜೊತೆಗೆ ವಿವಿಧೆಡೆ ಬೈಕ್ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಸಂಗತಿ ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸ್ ಇಲಾಖೆಯು ನ. 24 ರಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

The incident took place on November 22 when the Shimoga rural station police arrested the three accused from Bhadravathi on charges of stealing bikes from different places. Irman Yane Immu (26) who works as a mechanic, Madan Kumar Yane Gunda who works in woodwork and Harish N (18) who works in mortar have been identified as residents of Sitapur in Bhadravati.

Congress wins in Channapatna, Sandur, Shiggavi; Big shock for BJP-JDS alliance! ಚನ್ನಪಟ್ಟಣ, ಸಂಡೂರು, ಶಿಗ್ಗಾವಿಯಲ್ಲಿ ಕಾಂಗ್ರೆಸ್ ಜಯಭೇರಿ ; ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಭಾರೀ ಶಾಕ್! Previous post election result | ಚನ್ನಪಟ್ಟಣ, ಸಂಡೂರು, ಶಿಗ್ಗಾವಿಯಲ್ಲಿ ಕಾಂಗ್ರೆಸ್ ಜಯಭೇರಿ ; ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಭಾರೀ ಶಾಕ್!
Shimoga: Road widening work - electricity supply cut off in various places on January 4! shimoga | ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ - ಜ. 4 ರಂದು ವಿವಿಧೆಡೆ ವಿದ್ಯುತ್ ಪೂರೈಕೆ ಸ್ಥಗಿತ! Next post shimoga | ಶಿವಮೊಗ್ಗ ನಗರದ ವಿವಿಧೆಡೆ ನವೆಂಬರ್ 27 ರಂದು ವಿದ್ಯುತ್ ವ್ಯತ್ಯಯ!