shimoga | Shimoga: Special Registration Campaign of yuvanidhi scheme shimoga | ಶಿವಮೊಗ್ಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ

yuva nidhi scheme | ನಿರುದ್ಯೋಗಿಗಳಿಗೆ ಮಾಸಾಶನ ನೀಡುವ ಯುವನಿಧಿ ಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ (shivamogga), ನ. 27: ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣೆ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳ ಮೂಲಕ ಆನ್‌ಲೈನ್ ನೋಂದಣಿ ಆಹ್ವಾನಿಸಿದೆ.

2022-23ನೇ ಹಾಗೂ ನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ರೂ. 3000/- (ಪದವೀಧರ ನಿರುದ್ಯೋಗಿಗಳು) ಹಾಗೂ ರೂ. 1500/- (ಡಿಪ್ಲೋಮಾ ಪಡೆದ ನಿರುದ್ಯೋಗಿಗಳು) ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.

2022-23ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣಾರಾದವರು, ಪದವಿ/ಡಿಪ್ಲೊಮಾ ನಂತರ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವ್ಯಾಸಂಗ ಮುಂದುವರಿಸದೇ ಇರುವವರು,

ಕರ್ನಾಟಕದಲ್ಲಿ ವಾಸವಿರುವವರು ಯುವನಿಧಿ ಯೋಜನೆಗೆ ನೊಂದಣಿ ಮಾಡಿಕೊಳ್ಳಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Registration for Youth Fund Scheme of Government of Karnataka is ongoing and eligible are invited to online registration through Seva Sindhu portal or nearby Village One, Shimoga One centers.

shimoga | Shimoga: Anganwadi Worker - Assistant Posts Provisional Selection List Announced, Objection Allowed shimoga | ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆ - ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ, ಆಕ್ಷೇಪಣೆ ಅವಕಾಶ Previous post shimoga | ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು – ಸಹಾಯಕಿಯರ ತಾತ್ಕಾಲಿಕ ಪಟ್ಟಿ ಪ್ರಕಟ ; ಆಕ್ಷೇಪಣೆ ಸಲ್ಲಿಸಲು ಅವಕಾಶ
Unresolved E-Property Confusion : Focus on CM Siddaramaiah? ಪರಿಹಾರವಾಗದ ಇ – ಆಸ್ತಿ ಗೊಂದಲ : ಗಮನಹರಿಸುವರೆ ಸಿಎಂ ಸಿದ್ದರಾಮಯ್ಯ? Next post ಪರಿಹಾರವಾಗದ ಇ – ಆಸ್ತಿ ಗೊಂದಲ : ಗಮನಹರಿಸುವರೆ ಸಿಎಂ ಸಿದ್ದರಾಮಯ್ಯ?