ಮಾ.17 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ!

ಶಿವಮೊಗ್ಗ, ಮಾ. 16: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಮಾ.17 ರಂದು ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುಗಣಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ನೂತನ ಬಸ್ ಘಟಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲೂಕಿನ ಸಾರ್ವಜನಿಕರು ಆಗಮಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗದವತಿಯಿಂದ 125 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

ಆದ್ದರಿಂದ ಮಾ. 17 ರಂದು ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿರುತ್ತಾರೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →