shimoga | ಶಿವಮೊಗ್ಗ ನಗರ – ಹೊರವಲಯದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ : ಯಾವಾಗ? ಎಲ್ಲೆಲ್ಲಿ?

Shimoga: In which areas will there be no electricity on January 31? shimoga | ಶಿವಮೊಗ್ಗ : ಯಾವೆಲ್ಲ ಏರಿಯಾಗಳಲ್ಲಿ ಜ. 31 ರಂದು ವಿದ್ಯುತ್ ಇರಲ್ಲ?

ಶಿವಮೊಗ್ಗ (shivamogga), ಡಿ. 4: ಶಿವಮೊಗ್ಗ ನಗರದ ಎಲೆ ರೇವಣ್ಣಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಡಿ. 6 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಸಾವರ್ಕರ್ ರಸ್ತೆ, ಲಷ್ಕರ್ ಮೊಹಲ್ಲಾ,

ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಶಿವಮೊಗ್ಗ, ಡಿ. 4: ಶಿವಮೊಗ್ಗ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ  ನಿರ್ವಹಣಾ ಕಾಮಗಾರಿಯನ್ನು ಡಿ. 5 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಮಾಚೇನಹಳ್ಳಿ, ಬಿದರೆ, ನಿದಿಗೆ, ಹಾರೆಕಟ್ಟೆ, ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿಕ್ಯಾಂಪ್, ಹೊಸೂರು, ದುಮ್ಮಳ್ಳಿ, ಶುಗರ್ ಕಾಲೋನಿ, ಓತಿಘಟ್ಟ,

ಜಯಂತಿಗ್ರಾಮ, ಹೊನ್ನವಿಲೆ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನಹಳ್ಳಿ, ರಾಮಮೂರ್ತಿ ಮಿನರಲ್ಸ್ & ಮೆಟಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ. ಪಾರ್ಕ್,

ಮಲ್ನಾಡ್ ಆಸ್ಪತ್ರೆ, ನವುಲೆಬಸವಾಪುರ, ಕೆ.ಎಸ್.ಆರ್.ಪಿ.ಕಾಲೋನಿ, ಕೆ.ಎಂ.ಎಫ್ ಡೈರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →