s m krishna passed away | ಡಿ. 11 ರಂದು ಸರ್ಕಾರಿ ಕಚೇರಿ, ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ!
ಬೆಂಗಳೂರು (bengaluru), ಡಿ.10: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ ಎಂ ಕೃಷ್ಣ (92) ಅವರು ವಿಧಿವಶರಾದ ಹಿನ್ನೆಲೆಯಲ್ಲಿ, ಡಿ. 11 ರ ಬುಧವಾರದಂದು ರಾಜ್ಯದ ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಎಸ್ ಎಂ ಕೃಷ್ಣ ಅವರ ಗೌರವಾರ್ಥ ಡಿ. 10 ರಿಂದ ಡಿ. 12 ರವರೆಗೆ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಈ ವೇಳೆ ಸಾರ್ವಜನಿಕ ಮನರಂಜನಾ ಸಮಾರಂಭ ಆಯೋಜನೆ ಮಾಡುವುದರ ಮೇಲೆ ನಿರ್ಬಂಧ ವಿಧಿಸಲಾಗಿದೆ.
ರಾಜ್ಯದ ಎಲ್ಲ ಸರ್ಕಾರಿ ಕಚೇರಿ ಕಟ್ಟಡಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಹಾರಿಸಬೇಕು ಎಂದು ರಾಜ್ಯ ಸರ್ಕಾರವು ತನ್ನ ಆದೇಶದಲ್ಲಿ ಮಾಹಿತಿ ನೀಡಿದೆ.
ಎಸ್ ಎಂ ಕೃಷ್ಣ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರವು, ಡಿ. 11 ರಂದು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಎಂದು ಸರ್ಕಾರ ತಿಳಿಸಿದೆ.
ಸಂತಾಪ : ಎಸ್ ಎಂ ಕೃಷ್ಣ ಅವರ ನಿಧನಕ್ಕೆ ವಿವಿಧ ಪಕ್ಷಗಳ ರಾಜಕೀಯ ನಾಯಕರು ಸೇರಿದಂತೆ ಸಂಘಸಂಸ್ಥೆಗಳು, ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಭಗವಂತ ಚಿರ:ಶಾಂತಿ ಕರುಣಿಸಲಿ. ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
In the wake of the death of former chief minister and senior politician SM Krishna (92), the state government today issued an order declaring a holiday for all government offices and schools and colleges in the state on Wednesday, December 11.
