Jogfalls | ಜೋಗ ಜಲಪಾತ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ! 

The eye-catching beauty of the water body of Joga Falls! ಕಣ್ಮನ ಸೆಳೆಯುತ್ತಿರುವ ಜೋಗ ಜಲಪಾತದ ಜಲರಾಶಿಯ ಸೌಂದರ್ಯ!

ಶಿವಮೊಗ್ಗ (shivamogga), ಡಿ. 16 : ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ಬಿರುಸಿನಿಂದ ಸಾಗಿದೆ.

ಈ ಹಿನ್ನೆಲೆಯಲ್ಲಿ ಜನವರಿ 01 ರಿಂದ ಮಾರ್ಚ್ 15 ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸುವುದು.

The main gate of Joga Falls in Sagar Taluk of the district and comprehensive development work was going on to provide infrastructure to the tourists. In this background, the Collector has informed that the entry of public and tourists has been restricted for 3 months from January 01 to March 15.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →