
bhadravati | ಭದ್ರಾವತಿ : ರೈಸ್’ಮಿಲ್ ನಲ್ಲಿ ಬಾಯ್ಲರ್ ಸ್ಫೋಟ – ಹಲವರಿಗೆ ಗಾಯ!
ಭದ್ರಾವತಿ, ಡಿ. 19: ಭದ್ರಾವತಿ ಪಟ್ಟಣದ ಚನ್ನಗಿರಿ ರಸ್ತೆಯಲ್ಲಿರುವ ರೈಸ್ ಮಿಲ್ ವೊಂದರಲ್ಲಿ, ಡಿ. 19 ರ ಗುರುವಾರ ಸಂಜೆ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ. ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಪ್ರಾಥಮಿಕ ಹಂತದ ಮಾಹಿತಿ ಅನುಸಾರ, ಕುಚಲಕ್ಕಿ ತಯಾರಿಸುವ ಬಾಯ್ಲರ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಸುಮಾರು ಐವರು ಕಾರ್ಮಿಕರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ರಭಸಕ್ಕೆ ರೈಸ್ ಮಿಲ್ ಕಟ್ಟಡವು ಭಾಗಶಃ ಕುಸಿದು ಬಿದ್ದಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸೇರಿದಂತೆ ಪೊಲೀಸರು ಭೇಟಿ ನೀಡಿದ್ದಾರೆ. ಘಟನೆಯ ಕುರಿತಂತೆ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.
ಭಾರೀ ಶಬ್ದ : ಬಾಯ್ಲರ್ ಸ್ಫೋಟದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಶಬ್ಧ ಕೇಳಿಸಿದೆ. ಮನೆಯ ಕಿಟಕಿ – ಬಾಗಿಲುಗಳು ಅಲುಗಾಡಿವೆ. ಇದು ನಾಗರೀಕರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಮತ್ತೊಂದೆಡೆ, ಘಟನಾ ಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ
ಸಂಚಾರ ಬಂದ್ : ರೈಸ್ ಮಿಲ್ ಸ್ಫೋಟಗೊಂಡ ಪರಿಣಾಮದಿಂದ ಚನ್ನಗಿರಿ ರಸ್ತೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಜೊತೆಗೆ ಘಟನಾ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
A massive explosion occurred in the evening of December 19 at Ganesh Rice Mill on Channagiri Road in Bhadravati town. Many people were injured in the incident.