
c t ravi case | ಸಿ ಟಿ ರವಿ ಬಂಧನದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಮಂಡ್ಯ (mandya), ಡಿ. 20: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ ಟಿ ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ಅವರು ಇಂದು ಸಿ.ಟಿ.ರವಿಯವರನ್ನು ಬೆಂಬಲಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ ಎಂದು ಹೇಳಿದ್ದಾರೆ.
ಆದರೆ ನಾನು ಅದನ್ನು ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು ? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ ಎಂದರು.
ಪದ ಬಳಕೆಯಾಗಿರುವುದು ಸತ್ಯ : ಸಭಾಪತಿ ಬಸವರಾಜ ಹೊರಟ್ಟಿಯವರು , ಸಿಟಿ ರವಿಯವರು ಪ್ರಸ್ಟ್ರೇಷನ್ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿ.ಟಿ.ರವಿಯವರು ತಾನು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.
ರವಿ ಆಡಿದ ಕೆಟ್ಟ ಮಾತನ್ನು ಕೇಳಿರುವುದಾಗಿ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು, ಪದಬಳಕೆಯಾಗಿರುವುದು ಸತ್ಯ ಎಂದರು.
ಕಾನೂನಿನ ಕ್ರಮ ಜರುಗಿಸಲೇಬೇಕಾಗುತ್ತದೆ : ಸಿ ಟಿ ರವಿಯವರು ತನಗೆ ಜೀವಬೆದರಿಕೆಯಿದ್ದು, ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಎಫ್ ಐ ಆರ್ ದಾಖಲಾದ ಮೇಲೆ ಪೊಲೀಸರು ತನಿಖೆ ನಡೆಸಲೇಬೇಕಾಗುತ್ತದೆ.
ಕಾನೂನಿನ ಕ್ರಮ ಮಾಡಲೇಬೇಕಾಗುತ್ತದೆ. ಸಿ.ಟಿ.ರವಿ ವಿರುದ್ಧ ಆಕ್ರೋಶಗೊಂಡಿದ್ದ ಜನರು ಬೆಳಗಾವಿಯಲ್ಲಿದ್ದ ಕಾರಣದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದರು.
ಮಂಡ್ಯ ಅಪ್ಪಟ ಕನ್ನಡದ ನೆಲ : ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೆಳನದ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಅಪ್ಪಟ ಕನ್ನಡ ನೆಲ ಮಂಡ್ಯ. ಮಂಡ್ಯಕ್ಕೆ ಬರುವ ಪರಭಾಷಿಕರು ಸಹ ಕನ್ನಡವನ್ನು ಕಲಿಯುತ್ತಾರೆ. ಕನ್ನಡ ನಾಡಿನ ಭಾಷೆ ,ರಾಜ್ಯಭಾಷೆ ಆಗಿದೆ ಎಂದರು.
Normally no girl can make a false complaint about such allegations – Chief Minister Siddaramaiah… BJP is supporting the derogatory language used against girls. CT Ravi used foul language by those who were there. He said that there is audio and video evidence of speaking such bad words.
#laxmihebbalkar, #laxmi hebbalkar case, #ctravi, #bjp mla c t ravi arrested,