
Shimoga | ಶಿವಮೊಗ್ಗ : ಡಿ. 22 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಡಿ. 20: ಶಿವಮೊಗ್ಗ ತಾಲೂಕಿನ ಗಾಜನೂರು ಶಾಖಾ ವ್ಯಾಪ್ತಿಯ ವಿದ್ಯುತ್ ಕೇಂದ್ರದಲ್ಲಿ ಡಿಸೆಂಬರ್ 22 ರಂದು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.
ಸದರಿ ವಿದ್ಯುತ್ ಕೇಂದ್ರದ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಈ ಕೆಳಕಂಡ ಗ್ರಾಮಗಳಲ್ಲಿ ಡಿ. 22 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ: ಗಾಜನೂರು, ಗಾಜನೂರು ಕ್ಯಾಂಪ್ ಮತ್ತು ಜಲಾಶಯ, ಸಕ್ರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ,
ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ,
ತಿಮ್ಕಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
Mescom said that on December 22, quarterly maintenance work was carried out at the power station under Gajanur branch of Shimoga taluk.
Mescom has informed that there will be a variation in power supply from 10 am to 6 pm on December 22 in the villages that are supplied with electricity from the lines of the said power station.