A competitive examination has been conducted for the vacant posts of Village Administrative Officer in the Revenue Department and the list of candidates has been published.

shimoga | ಗ್ರಾಮ ಆಡಳಿತ ಅಧಿಕಾರಿ ಹುದ್ದೆ : ಅಭ್ಯರ್ಥಿಗಳ ಪಟ್ಟಿ ಪ್ರಕಟ

ಶಿವಮೊಗ್ಗ (shivamogga), ಡಿ. 22: ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ಗ್ರಾಮ‌ ಆಡಳಿತ ಅಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದ್ದು, ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.

ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 29-09-2024, 26-10-2024 ಹಾಗೂ 27-10-2024 ರಂದು ಕಡ್ಡಾಯ ಕನ್ನಡ ಹಾಗೂ ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಫಲಿತಾಂಶ ಪ್ರಕಟಿಸಲಾಗಿತ್ತು.

ಅದರಂತೆ ಶಿವಮೊಗ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಒಟ್ಟು 31 ಗ್ರಾಮ ಅಡಳಿತ ಅಧಿಕಾರಿ ಹುದ್ದೆಗಳಿಗೆ ಒಟ್ಟು 1288 ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರಂತೆ ಅರ್ಹತೆ ಪಡೆದಿರುವ,

ಒಟ್ಟು 1288 ಅಭ್ಯರ್ಥಿಗಳ ಪೈಕಿ ಈಗಾಗಲೇ ಅನುಮೋದನೆಯಾಗಿರುವ ಹುದ್ದೆಗಳಿಗೆ ಪ್ರಾಧಿಕಾರ ನೀಡಿರುವ ಮೆರಿಟ್ ಪಟ್ಟಿಯಲ್ಲಿ 1:3 ಅನುಪಾತದಂತೆ ಅಭ್ಯರ್ಥಿಗಳ ಪಟ್ಟಿಯನ್ನು ಶಿವಮೊಗ್ಗ ಜಿಲ್ಲಾ ವೆಬ್ ಸೈಟ್ https://shivamogga.nic.in ರಲ್ಲಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಕೋರಿರುವ ವಿವಿಧ ಮೀಸಲಾತಿಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು (ನಿಗದಿತ ದಿನಾಂಕದೊಳಗೆ ಪಡೆಯಲಾದ) ಹಾಗೂ ವಿದ್ಯಾರ್ಹತೆಯ ಮೂಲ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳನ್ನು ಪರಿಶೀಲನೆಗಾಗಿ,

ದಿನಾಂಕ: 06.01.2025 ರಿಂದ 07.01.2025 ರವರೆಗೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಮಯ 11:00 ಘಂಟೆ ಯಿಂದ ಸಂಜೆ 5 ಗಂಟೆಯೊಳಗಾಗಿ ಖುದ್ದಾಗಿ ಹಾಜರಾಗಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವುದು, ಗೈರು ಹಾಜರಾದಲ್ಲಿ ಎರಡನೇ ಅವಕಾಶವನ್ನು ನೀಡಲಾಗುವುದಿಲ್ಲ.

ಜಿಎಂ ಎಕ್ಸ್ ಸರ್ವಿಸ್ GM Ex  02 ಅಭ್ಯರ್ಥಿಗಳು ಮತ್ತು ಎಸ್ ಸಿ ಪಿಹೆಚ್  01 ಅಭ್ಯರ್ಥಿ ಮತ್ತು 2ಎ_ಪಿಹೆಚ್ 01 ಅಭ್ಯರ್ಥಿ ಅನುಪಾತದಲ್ಲಿ ಲಭ್ಯವಿಲ್ಲದಿರುವುದರಿಂದ 89 ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

A competitive examination has been conducted for the vacant posts of Village Administrative Officer in the Revenue Department and the list of candidates has been published.

Shivamogga: Woman's body found in Bhadra canal! ಶಿವಮೊಗ್ಗ : ಭದ್ರಾ ನಾಲೆಯಲ್ಲಿ ಮಹಿಳೆಯ ಮೃತದೇಹ ಪತ್ತೆ! Previous post shimoga news | ಶಿವಮೊಗ್ಗ : ಪತ್ನಿಯ ಕೊ*ಲೆ – ಪತಿಯ ಸೆರೆ!
Shimoga: Road widening work - electricity supply cut off in various places on January 4! shimoga | ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ - ಜ. 4 ರಂದು ವಿವಿಧೆಡೆ ವಿದ್ಯುತ್ ಪೂರೈಕೆ ಸ್ಥಗಿತ! Next post shimoga | ಶಿವಮೊಗ್ಗ : ರಾಷ್ಟ್ರೀಯ ಹೆದ್ಧಾರಿ ಕಾಮಗಾರಿ – ಡಿ. 23 ರಂದು ವಿದ್ಯುತ್ ವ್ಯತ್ಯಯ