
shimoga | ಯಾವಾಗ ಬರಲಿದೆ ಗೃಹಲಕ್ಷ್ಮೀ ಯೋಜನೆ ಹಣ? ಗ್ಯಾರಂಟಿ ಪ್ರಾಧಿಕಾರ ಅಧ್ಯಕ್ಷರು ಹೇಳಿದ್ದೇನು?
ಶಿವಮೊಗ್ಗ (shivamogga), ಜ. 7: ಮನೆಯೊಡತಿಯ ಬ್ಯಾಂಕ್ ಖಾತೆಗೆ ಮಾಸಿಕ 2 ಸಾವಿರ ರೂ. ಸಂದಾಯ ಮಾಡುವ ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ 16 ನೇ ಕಂತಿನ ಹಣ, ಜನವರಿ 14 ರಿಂದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಂದಾಯವಾಗಲಿದೆ ಎಂದು ಶಿವಮೊಗ್ಗ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ್ ತಿಳಿಸಿದ್ದಾರೆ.
ಈ ಕುರಿತಂತೆ ಜ. 7 ರಂದು ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಡಿಸೆಂಬರ್ ತಿಂಗಳ ಕಂತಿನ ಹಣ ಫಲಾನುಭವಿಗಳಿಗೆ ವರ್ಗಾವಣೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈಗಾಗಲೇ ಆರ್ಥಿಕ ಇಲಾಖೆಗೆ ಹಣ ವರ್ಗಾವಣೆಯಾಗಿದೆ. ಈ ವಿಷಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಪರಿಶೀಲಿಸಿ : ಗೃಹಲಕ್ಷ್ಮೀ ಯೋಜನೆ ಹಣ ಬ್ಯಾಂಕ್ ಖಾತೆಗೆ ಜಮೆಯಾಗದಿದ್ದರೆ, ಅಂತಹ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಹಾಗೆಯೇ ಬ್ಯಾಂಕ್ ಖಾತೆಯ ಇ – ಕೆವೈಸಿ ಮಾಡಿಸಬೇಕು ಎಂದು ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯ ಶೇ. 90 ರಷ್ಟು ಮಹಿಳೆಯರು ಲಾಭ ಪಡೆದುಕೊಂಡಿದ್ದಾರೆ. ಸದರಿ ಯೋಜನೆಯಡಿ ಇಲ್ಲಿಯವರೆಗೂ 15 ಕಂತುಗಳಡಿ, 30 ಸಾವಿರ ಹಣವನ್ನು ಫಲಾನುಭವಿಗಳು ಪಡೆದುಕೊಂಡಿದ್ದಾರೆ. ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು, ಸ್ವಯಂ ಉದ್ಯೋಗ ಆರಂಭಿಸಿದ್ದಾರೆ.
ಹಾಗೆಯೇ ಉಪಯುಕ್ತ ವಸ್ತುಗಳನ್ನು ಖರೀದಿಸಿ ತಮ್ಮ ಜೀವನ ಹಸನುಗೊಳಿಸಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣ ಮಹಿಳೆಯರ ಆರ್ಥಿಕ ಅಭಿವೃದ್ದಿಗೆ ಪೂರಕವಾಗಿದೆ. ಹಾಗೂ ಮಹಿಳೆಯರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ತರುವಲ್ಲಿ ಸಹಕಾರಿಯಾಗಿದೆ ಎಂದು ಸಿ ಎಸ್ ಚಂದ್ರಭೂಪಾಲ್ ಅವರು ತಿಳಿಸಿದ್ದಾರೆ.
“Gruha Lakshmi” is the flagship program of Government of Karnataka, which provides Rs 2000/- to every month to women of the house who maintains household activities. The project aims to provide financial support to women in Karnataka, who are heads of households. #shimoga #ಶಿವಮೊಗ್ಗ