ಬೆಂಗಳೂರು : ಸಿಎಂ ಸಮ್ಮುಖದಲ್ಲಿ ಆರು ಜನ ನಕ್ಸಲೀಯರು ಶರಣು!

Bengaluru: Six naxalites surrender in presence of CM! ಬೆಂಗಳೂರು : ಸಿಎಂ ಸಮ್ಮುಖದಲ್ಲಿ ಆರು ಜನ ನಕ್ಸಲೀಯರು ಶರಣು!

ಬೆಂಗಳೂರು (bengaluru), ಜ. 8: ಮಲೆನಾಡು ಭಾಗದ ಅರಣ್ಯದಲ್ಲಿ ಕಾರ್ಯಾಚರಿಸುತ್ತಿದ್ದ ಆರು ಜನ ನಕ್ಸಲೀಯರು, ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದಾರೆ. ಸಮಾಜದ ಮುಖ್ಯವಾಹಿನಿಗೆ ಆಗಮಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ ನಡೆದ ಕಾರ್ಯಕ್ರಮದಲ್ಲಿ ನಕ್ಸಲ್ ನಾಯಕರಾದ ಮುಂಡುಗಾರು ಲತಾ, ವನಜಾಕ್ಷಿ, ಸುಂದರಿ, ಮಾರಪ್ಪ ಅರೋಲಿ, ವಸಂತ ಟಿ, ಎನ್ ಜೀಶಾ ಮುಖ್ಯವಾಹಿನಿಗೆ ಮರಳಿದ ನಕ್ಸಲೀಯರಾಗಿದ್ದಾರೆ.

ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್, ಡಿಸಿಎಂ ಡಿಕೆ ಶಿವಕುಮಾರ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಅಲೋಕ್ ಮೋಹನ್, ಶಾಂತಿಗಾಗಿ ನಾಗರಿಕರ ವೇದಿಕೆ ಮುಖಂಡರು, ಶರಣಾಗುತ್ತಿರುವ ನಕ್ಸಲ್ ನಾಯಕರ ಕುಟುಂಬದ ಸದಸ್ಯರು ಇದ್ದರು.

ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದರು. ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು ಎಂದು ತಿಳಿಸಿದರು.

ನಕ್ಸಲಿಸಂ ಶಸ್ತ್ರಾಸ್ತ್ರ ಹೋರಾಟಕ್ಕೆ  ಸಂವಿಧಾನದಲ್ಲಿ, ಪ್ರಜಾಪ್ರಭತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್‌ ವಸತಿಗೆ ಸರ್ಕಾರ ನೆರವು ಒದಗಿಸಿದೆ ಎಂದು ಹೇಳಿದರು.

ಶಾಂತಿಗಾಗಿ ನಾಗರಿಕ ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರಕಾರ ಎಲ್ಲಾ ನೆರವು ನೀಡಲಿದೆ ಎಂದು ಹೇಳಿದ್ದೆ. ನಾವು ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಅವರ ಬೇಡಿಕೆಗೆ ಸ್ಪಂದಿಸಲು ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ ಎಂದರು.

ಶಸ್ತ್ರಾಸ್ತ್ರ ಮೂಲಕ ಹೋರಾಟ ಮಾಡಿ ನ್ಯಾಯ ಪಡೆಯಲು ಪ್ರಜಾಪ್ರಭುತ್ವದಲ್ಲಿ‌, ಸಂವಿಧಾನದಲ್ಲಿ‌ ಅವಕಾಶವಿಲ್ಲ. ಶಾಂತಿಯುತವಾಗಿ ಹೋರಾಟ ನಡೆಸಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಸರ್ಕಾರ ಇದನ್ನು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ಸುಮ್ಮನಿರಲ್ಲ ಎಂದು ತಿಳಿಸಿದರು.

ಅನ್ಯಾಯ ಕಡಿಮೆ ಮಾಡಲು ನಮ್ಮ ಸರ್ಕಾರ ಬಹಳ ಪ್ರಯತ್ನ ಮಾಡುತ್ತಿದೆ. ಯಾರ ಮೇಲೆಯೂ ಅನ್ಯಾಯ ಆಗಬಾರದು ಎಂಬುವುದು ನಮ್ಮ ಧ್ಯೇಯ. ಬಡವರ ಹಕ್ಕುಗಳ ರಕ್ಷಣೆಗಾಗಿ ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಲು ಅನೇಕ ಕಾರ್ಯಕ್ರಮ ಜಾರಿ ಮಾಡಿದೆ.

ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆ ಉದ್ದೇಶ ಇದೇ ಆಗಿದೆ. ಗೌರವಯುತವಾಗಿ ಬಡವರು ಬದುಕಲು ಅವಕಾಶ ಇದರಿಂದ ಸಿಗಲಿದೆ. ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಬದುಕಲು ಶಕ್ತಿ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದು ಹೇಳಿದರು.

ನಕ್ಸಲಿಸಂ ರಹಿತವಾದ ಮುಕ್ತವಾದ ಸಮಾಜ ನಮ್ಮ ಗುರಿ. ಈ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗೆ ಬರುವ ನಕ್ಸಲಿಯರಿಗೆ ಎಲ್ಲಾ ರೀತಿಯ ನೆರವು ಬಹಿರಂಗವಾಗಿ ಹೇಳಿದ್ದೆ. ನಿಮಮ್ಮನ್ನು ಕ್ರಿಮಿನಲ್‌ಗಳ ರೀತಿ ನೋಡದೆ, ಮಾನವರಂತೆ ನೋಡುವ ಭರವಸೆ ನೀಡಿದ್ದೆ. ನಕ್ಸಲೀಯರ ಶರಣಾಗತಿಯಲ್ಲಿ ಸಮಿತಿಯ ಸದಸ್ಯರ ಪಾತ್ರ ಮುಖ್ಯವಾಗಿದ್ದು, ಅವರಿಗೆ ಹಾಗೂ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಬಯಸುತ್ತೇನೆ ಎಂದರು.

Bengaluru, January 8: Six Naxalites, who were operating in the forests of Malenadu region, surrendered in the presence of Chief Minister Siddaramaiah this evening. They have reached the mainstream of society.

Naxal leaders such as Mundugaru Lata, Vanajakshi, Sundari, Marappa Aroli, Vasant T, N Jeesha are Naxalites who have returned to the mainstream in a program held at CM Home Office Krishna this evening.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →