
ಬೆಂಗಳೂರು ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ : ಸಿಎಂ ಹೇಳಿದ್ದೇನು?
ವಿಜಯನಗರ, ಡಿ. 12: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು’ ಎಂದು ತಿಳಿಸಿದ್ದಾರೆ.
ಅವರು ಜ. 12 ರಂದು ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಪ್ರತಿಭಟನೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದ್ದಾರೆ.
ಜಾತಿಗಣತಿ ವರದಿ: ಜಾತಿಗಣತಿ ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಗಣತಿ ವರದಿಗಳ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ.
160 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಇದೇ ವೇಳೆ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
In Bengaluru’s Chamarajpet, miscreants brutally cut off the udders of three cows late last night.
Chief Minister Siddaramaiah has reacted to the case of cow udder cut off and torture in Bengaluru’s Chamarajpet. Cruelty to animals is a crime and the culprits will be found and punished, he said.
He spoke to the media at Hagaribommanahalli in Vijayanagara district on January 12.