Shimoga Palike | Municipality area revision: Speed in Tumkur - snail pace in Shivamogga! | Continued negligence of public representatives - officials..!! ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ತುಮಕೂರಲ್ಲಿ ವೇಗ - ಶಿವಮೊಗ್ಗದಲ್ಲಿ ಆಮೆವೇಗ! | ಮುಂದುವರಿದ ಜನಪ್ರತಿನಿಧಿಗಳು - ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ..!!

shimoga | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ಮಹತ್ವದ ಬೆಳವಣಿಗೆ!

ಶಿವಮೊಗ್ಗ (shivamogga), ಜ. 13: ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ಪ್ರಕ್ರಿಯೆ ಇದೀಗ ಮತ್ತೆ ಚುರುಕುಗೊಳ್ಳಲಾರಂಭಿಸಿದೆ. ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಡಳಿತಾಧಿಕಾರಿಗಳ ಅನುಮತಿ ಪಡೆದು, ಸರ್ಕಾರಕ್ಕೆ ವರದಿ ಸಲ್ಲಿಸಲು ಪಾಲಿಕೆ ಆಡಳಿತ ಸಿದ್ಧತೆ ಮಾಡಿಕೊಳ್ಳುತ್ತಿರುವ ಮಾಹಿತಿಗಳು ಕೇಳಿಬಂದಿವೆ.

ಕಳೆದ ಕೆಲ ತಿಂಗಳುಗಳ ಹಿಂದೆಯೇ, ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ಕುರಿತಂತೆ ಪಾಲಿಕೆಯ 9 ಅಧಿಕಾರಿಗಳ ಪ್ರತ್ಯೇಕ ತಂಡಗಳು ನಗರದ ಹೊರವಲಯದ ಪ್ರದೇಶಗಳಲ್ಲಿ ಮಾಹಿತಿ ಕಲೆ ಹಾಕಿದ್ದವು. ಜೊತೆಗೆ ಡ್ರೋನ್ ಮೂಲಕವು ಮಾಹಿತಿ ಸಂಗ್ರಹಣೆ ಕಾರ್ಯ ನಡೆಸಲಾಗಿತ್ತು.

ಸರಿಸುಮಾರು 23 ಪ್ರದೇಶಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ಚರ್ಚೆಗಳು ನಡೆದಿದ್ದವು. ಈ ಸಂಬಂಧ ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ವರದಿಗೆ ಅನುಮತಿ ಪಡೆದು, ಮುಂದಿನ ಕ್ರಮಕ್ಕಾಗಿ ರಾಜ್ಯ ಸರ್ಕಾರಕ್ಕೆ ಅಂತಿಮ ಹಂತದ ವರದಿ ಸಲ್ಲಿಸಬೇಕಾಗಿತ್ತು.

ಆದರೆ ಸದರಿ ಪ್ರಕ್ರಿಯೆಗಳು ವಿಳಂಬವಾಗಿದ್ದವು. ಈ ನಿಟ್ಟಿನಲ್ಲಿ ಯಾವುದೇ ಕ್ರಮಗಳು ನಡೆದಿರಲಿಲ್ಲ. ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ವಿಷಯ ಮತ್ತೆ ನೆನೆಗುದಿಗೆ ಬೀಳುವಂತಾಗಿತ್ತು. ಈ ನಡುವೆ ಪಾಲಿಕೆಗೆ ಚುನಾವಣೆ ನಡೆಯಲಿದ್ದು, ಈ ಕಾರಣದಿಂದ ವ್ಯಾಪ್ತಿ ಪರಿಷ್ಕರಣೆ ಅನುಮಾನ ಎಂಬ ಮಾತುಗಳು ಕೇಳಿಬಂದಿದ್ದವು.

ಈ ನಡುವೆ ಪಾಲಿಕೆ ಆಡಳಿತಾಧಿಕಾರಿಗಳು, ವ್ಯಾಪ್ತಿ ಪರಿಷ್ಕರಣೆ ವರದಿಗೆ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು ಸಲ್ಲಿಸುವಂತೆ ಸೂಚಿಸಿದ್ದಾರೆ. ಈಗಾಗಲೇ ಪಾಲಿಕೆ ಆಡಳಿತವು ಕೂಡ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿ ಅನುಮತಿ ಪಡೆದುಕೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಇದರಿಂದ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ವಿಷಯವು ಇದೀಗ ಮತ್ತೆ ಚರ್ಚೆಯ ಮುನ್ನೆಲೆಗೆ ಬರುವಂತಾಗಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಸುಮಾರು 28 ವರ್ಷಗಳ ನಂತರ ಶಿವಮೊಗ್ಗ ಸ್ಥಳಿಯಾಡಳಿತದ ವ್ಯಾಪ್ತಿ ಪರಿಷ್ಕರಣೆಯಾಗುವ ಸಾಧ್ಯತೆಗಳು ಕಂಡುಬರುತ್ತಿವೆ.

shimoga-plike-commissionar-kavitha-yogappanavar
shimoga-plike-commissionar-kavitha-yogappanavar

*** ‘ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ ಪರಿಷ್ಕರಣೆಗೆ ಸಂಬಂಧಿಸಿದಂತೆ, ಈಗಾಗಲೇ ಅಧಿಕಾರಿಗಳ ತಂಡಗಳ ಮೂಲಕ ಮಾಹಿತಿ ಕಲೆ ಹಾಕಲಾಗಿದೆ. ಡ್ರೋಣ್ ಮೂಲಕವು ಸರ್ವೇ ನಡೆಸಲಾಗಿದೆ. ಅಂತಿಮ ಹಂತದ ವರದಿ ಸಿದ್ದಪಡಿಸಲಾಗುತ್ತಿದೆ. ಪಾಲಿಕೆ ಆಡಳಿತಾಧಿಕಾರಿಗಳು ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಸಲ್ಲಿಸುವಂತೆ ಸೂಚಿಸಿದ್ದಾರೆ. ಅದರಂತೆ ಇಷ್ಟರಲ್ಲಿಯೇ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿ ಅನುಮತಿ ಪಡೆಯುವ ಪ್ರಕ್ರಿಯೆ ನಡೆಸಲಾಗುವುದು. ತದನಂತರ ಆಡಳಿತಾಧಿಕಾರಿಗಳ ಅನುಮತಿಯೊಂದಿಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ಅವರು ಜ. 13 ರಂದು ತಮ್ಮನ್ನು ಸಂಪರ್ಕಿಸಿದ ಸುದ್ಧಿಗಾರರಿಗೆ ಮಾಹಿತಿ ನೀಡಿದ್ದಾರೆ.

*** ನಗರಗಳ ಬೆಳವಣಿಗೆ, ಜನಸಂಖ್ಯೆಗೆ ಅನುಗುಣವಾಗಿ ನಿಯಮಿತವಾಗಿ ನಗರ – ಪಟ್ಟಣಗಳ ವ್ಯಾಪ್ತಿ ಪರಿಷ್ಕರಣೆ ಮಾಡಿಕೊಂಡು ಬರಲಾಗುತ್ತದೆ. ಆದರೆ ಶಿವಮೊಗ್ಗ ನಗರ ವ್ಯಾಪ್ತಿ ಮಾತ್ರ ಬರೋಬ್ಬರಿ ಸರಿಸುಮಾರು 30 ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ! ನಗರಸಭೆಯಿಂದ ಪಾಲಿಕೆಯಾಗಿ ಮೇಲ್ದರ್ಜೆಗೇರಿ ದಶಕವೇ ಉರುಳಿದರೂ ಪರಿಷ್ಕರಣೆಯಾಗಲಿ, ವಾರ್ಡ್ ಗಳ ಸಂಖ್ಯೆ ಹೆಚ್ಚಳವೂ ಆಗಿರಲಿಲ್ಲ. ದೇಶ – ರಾಜ್ಯದಲ್ಲಿ ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ನಗರಗಳಲ್ಲಿ ಶಿವಮೊಗ್ಗ ನಗರ ಸ್ಥಾನ ಪಡೆದರೂ, ನಗರಾಡಳಿತ ವ್ಯವಸ್ಥೆಯಲ್ಲಿ ಮಾತ್ರ ಯಾವುದೇ ಬದಲಾವಣೆಯಾಗಿರಲಿಲ್ಲ.

ಶಿವಮೊಗ್ಗ ಜಿಲ್ಲೆಯವರೇ ಸಿಎಂ, ಡಿಸಿಎಂ ಸೇರಿದಂತೆ ರಾಜ್ಯ ಸರ್ಕಾರದ ಹಂತದಲ್ಲಿ ಪ್ರಮುಖ ಹುದ್ದೆ ಅಲಂಕರಿಸಿದ್ದರೂ ಶಿವಮೊಗ್ಗ ನಗರಾಡಳಿತ ವಿಚಾರದಲ್ಲಿ ಮಾತ್ರ ಯಾವುದೇ ಜನಪರ ನಿರ್ಧಾರ ಕಾರ್ಯಗತವಾಗಿರಲಿಲ್ಲ. ಜನಪ್ರತಿನಿಧಿಗಳು ದಿವ್ಯ ನಿರ್ಲಕ್ಷ್ಯವಹಿಸಿದ್ದ ದೂರುಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿದ್ದವು. ಇದೀಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ. ಮುಂದೇನಾಗಲಿದೆ ಎಂಬುವುದನ್ನು ಇನ್ನಷ್ಟೆ ಕಾದು ನೋಡಬೇಕಾಗಿದೆ.

*** ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ನಡೆಸಿ, ಪ್ರಸ್ತುತವಿರುವ 35 ವಾರ್ಡ್ ಗಳನ್ನು ಕನಿಷ್ಠ 50 ಕ್ಕೆ ಏರಿಸಬೇಕು. ಈ ಮೂಲಕ ಪಾಲಿಕೆ ಆಡಳಿತ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆ ತರಬೇಕು ಎಂಬುವುದು ನಾಗರೀಕರ ಆಗ್ರಹವಾಗಿದೆ. ಈ ಹಿಂದಿನ ನಗರಸಭೆ ಆಡಳಿತದಲ್ಲಿದ್ದ 35 ವಾರ್ಡ್ ಗಳನ್ನೇ, ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿದ ವೇಳೆಯೂ ಮುಂದುವರಿಸಿಕೊಂಡು ಬರಲಾಗಿತ್ತು. ಕೆಲ ವಾರ್ಡ್ ಗಳು ಸಾಕಷ್ಟು ವಿಶಾಲ, ಜನಸಂಖ್ಯಾಬಾಹುಳ್ಯ ಹೊಂದಿವೆ. ಜನಸಂಖ್ಯೆ, ವ್ಯಾಪ್ತಿಗೆ ಅನುಗುಣವಾಗಿ ವಾರ್ಡ್ ಗಳ ಪರಿಷ್ಕರಣೆ ಮಾಡಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂಬುವುದು ಪ್ರಜ್ಞಾವಂತ ನಾಗರೀಕರ ಒತ್ತಾಯವಾಗಿದೆ.

The process of revising the scope of the Shimoga Municipal Corporation, which had fallen into disarray, has now started to speed up again. Information has been heard that the corporation administration is preparing to submit a report to the government after obtaining the permission of the district collector and corporation administrators.

A few months ago, separate teams of 9 officers of the Corporation had done information painting in the outskirts of the city regarding revision of the Corporation’s jurisdiction. In addition, information collection was done through drone.

shimoga | Police briefing in public places of Shimoga district! shimoga | ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಬ್ರೀಫಿಂಗ್! Previous post shimoga | ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಬ್ರೀಫಿಂಗ್!
shimoga | CA Site Allotment : Shimoga-Bhadravati Urban Development Authority Announcement? shimoga | ಸಿಎ ನಿವೇಶನ ಹಂಚಿಕೆ : ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಪ್ರಕಟಣೆಯೇನು? Next post shimoga | ನಿವೇಶನ ಕೊಡಿಸುವುದಾಗಿ ಹಣಕ್ಕೆ ಬೇಡಿಕೆ : ಶಿವಮೊಗ್ಗ– ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ ಎಚ್ಚರಿಕೆ!