ಶಿವಮೊಗ್ಗ, ಜ. 16: ತುಂಗಭದ್ರಾ ನದಿ ತೀರದಲ್ಲಿನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಅಡ್ಡೆ ಮೇಲೆ, ತಹಶೀಲ್ದಾರ್ ವಿ ಎಸ್ ರಾಜೀವ್ ನೇತೃತ್ವದ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ, ದಿಢೀರ್ ದಾಳಿಸಿ ಅಪಾರ ಪ್ರಮಾಣದ ಮರಳು ವಶಕ್ಕೆ ಪಡೆದ ಘಟನೆ, ಜ. 16 ರ ಸಂಜೆ ಶಿವಮೊಗ್ಗ ತಾಲೂಕಿನ ಹೊಳೆಹಟ್ಟಿ ಗ್ರಾಮದಲ್ಲಿ ನಡೆದಿದೆ.
ಖಚಿತ ವರ್ತಮಾನದ ಮೇರೆಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ದಾಳಿಯ ಮಾಹಿತಿ ಅರಿತ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದವರು, ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ.
ಸ್ಥಳದಲ್ಲಿ ಸುಮಾರು 25 ಟನ್ ನಷ್ಟು ಮರಳು ಮರಳು ವಶಕ್ಕೆ ಪಡೆಯಲಾಗಿದೆ. ಸದರಿ ಮರಳನ್ನು ಲೋಕೋಪಯೋಗಿ ಇಲಾಖೆ ವಶಕ್ಕೆ ಒಪ್ಪಿಸಲಾಗಿದೆ. ದಾಳಿಯ ವೇಳೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ತಬ್ಬಿಬ್ಬು! : ಅಧಿಕಾರಿಗಳ ತಂಡದ ದಾಳಿಯ ಮಾಹಿತಿ ಅರಿತ ಕೆಲ ಗ್ರಾಮಸ್ಥರು ಸ್ಥಳಕ್ಕಾಗಮಿಸಿ, ವಶಕ್ಕೆ ಪಡೆದ ಮರಳು ಬಿಡುವಂತೆ ಹಾಗೂ ಅಕ್ರಮ ಗಣಿಗಾರಿಕೆ ನಡೆಸಲು ಅವಕಾಶ ನೀಡುವಂತೆ ತಹಶೀಲ್ದಾರ್ ಅವರಿಗೆ ಮನವಿ ಮಾಡಿದ ಘಟನೆಯೂ ನಡೆದಿದೆ!
ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಮಾತನಾಡಿ, ‘ನಿಯಮಕ್ಕೆ ವಿರುದ್ಧವಾಗಿ ಮಾತನಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಅಕ್ರಮ ಮರಳು ಗಣಿಗಾರಿಕೆ ನಡೆಸಬಾರದು. ನಿಯಮಿತವಾಗಿ ದಿಢೀರ್ ದಾಳಿ ನಡೆಸಲಾಗುವುದು. ಅಕ್ರಮ ನಡೆಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
Shimoga, January 16: On the evening of January 16, a team of officials from various departments led by Tashsildar V S Rajiv suddenly raided the illegal sand mining on the banks of the Tungabhadra river and seized a huge amount of sand.
A team of officers has raided on the basis of a definite report. On learning about the raid, the illegal sand miners fled from the spot along with the vehicle.

