Free cataract surgery camp for senior citizens from January 21 at various places in Shimoga district shimoga | ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜ. 21 ರಿಂದ ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಶಿಬಿರ

shimoga | ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜ. 21 ರಿಂದ ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಶಿಬಿರ

ಶಿವಮೊಗ್ಗ (shivamogga), ಜ. 17: ಜನವರಿ 21 ರಿಂದ ಜ. 31 ರವರೆಗೆ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಶಿಬಿರವನ್ನು, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಸಂಯುಕ್ತಾಶ್ರಯದಲ್ಲಿ ಶಿಬಿರ ಆಯೋಜಿಸಲಾಗಿದೆ.

ವಿವರ : ಜ. 21 ರಂದು ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಸಂಪರ್ಕಿಸಬೇಕಾದ ದೂ.ಸಂ: 9535247757. ಹೊಸನಗರ ಸಂಯುಕ್ತ ಆಸ್ಪತ್ರೆ, ನಗರ, ದೂ.ಸಂ: 9731922693. ಜ. 22 ರಂದು ತೀರ್ಥಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಕಟಗಾರು, ದೂ.ಸಂ 9480767638.

ಜ. 24 ರಂದು ಭದ್ರಾವತಿಯ ಸಮುದಾಯ ಆರೋಗ್ಯ ಕೇಂದ್ರ ಹೊಳೆಹೊನ್ನೂರು, ದೂ.ಸಂ: 7899137243. ಜ.28 ರಂದು ಶಿವಮೊಗ್ಗದ ಸಮುದಾಯ ಆರೋಗ್ಯ ಕೇಂದ್ರ ಆಯನೂರು, ದೂ.ಸಂ: 9980150110.

ಸೊರಬದಲ್ಲಿ ಸಾರ್ವಜನಿಕ ಆಸ್ಪತ್ರೆ ಸೊರಬ, ದೂ.ಸಂ: 9110493122. ಜ.31 ರಂದು ಶಿಕಾರಿಪುರದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾರಗೊಪ್ಪ, ದೂ.ಸಂ: 9741161346 ಇಲ್ಲಿ ಶಿಬಿರ ನಡೆಸಲಾಗುತ್ತದೆ.

60 ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕ ಮಾತ್ರ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದ್ದು, ಶಿಬಿರಕ್ಕೆ ಹಾಜರಾಗಲು ವಯಸ್ಸಿನ ಸಂಬAಧ ಜನ್ಮ ದಿನಾಂಕ ನಮೂದಾಗಿರುವ ದಾಖಲಾತಿ ಅಂದರೆ ಇಲಾಖೆಯಿಂದ ವಿತರಿಸಲಾದ ಹಿರಿಯ ನಾಗರಿಕ ಗುರುತಿನ ಚೀಟಿ, ಪಾನ್‌ಕಾರ್ಡ್, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಜನನ ಪ್ರಮಾಣ ಪತ್ರ, ಶಾಲಾ/ ಕಾಲೇಜು ದಾಖಲಾತಿ ಹಾಗೂ ಆಧಾರ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನ ಸಲಹೆ ಮತ್ತು ಮಾಹಿತಿ ಕೇಂದ್ರ ದೂ.ಸಂ. 08182251676, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ದೂ.ಸಂ:08182222382, ಹಿರಿಯ ನಾಗರಿಕ ಸಹಾಯವಾಣಿ ಕೇಂದ್ರ ದೂ.ಸಂ:08182221188, ಅಂಗವಿಕಲರ ಪುನರ್ವಸತಿ ಕೇಂದ್ರ ದೂ.ಸಂ: 08182488438, ಮೊ;8088620178 ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

According to the announcement, free cataract surgery camp for senior citizens was organized from 21st to 31st January from 9.30 am to 1 pm in various places of Shimoga district.

The camp was organized at District Administration, District Panchayat, Women and Child Development Department, Disabled and Senior Citizen Empowerment Department, District Health and Family Welfare Department and District Blindness Control Program Complex.

shimoga | Special police patrol in Shimoga Bhadravati Shikaripura : 12 cases registered! shimoga | ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದಲ್ಲಿ ಪೊಲೀಸರ ವಿಶೇಷ ಗಸ್ತು : 12 ಕೇಸ್ ದಾಖಲು! Previous post shimoga | ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದಲ್ಲಿ ಪೊಲೀಸರ ವಿಶೇಷ ಗಸ್ತು : 12 ಕೇಸ್ ದಾಖಲು!
shimoga | Application invitation from farmers of Shimoga taluk for vegetable seed distribution shimoga | ತರಕಾರಿ ಬೀಜ ವಿತರಣೆಗೆ ಶಿವಮೊಗ್ಗ ತಾಲೂಕಿನ ರೈತರಿಂದ ಅರ್ಜಿ ಆಹ್ವಾನ Next post shimoga | ತರಕಾರಿ ಬೀಜ ವಿತರಣೆಗೆ ಶಿವಮೊಗ್ಗ ತಾಲೂಕಿನ ರೈತರಿಂದ ಅರ್ಜಿ ಆಹ್ವಾನ