shimoga | ತರಕಾರಿ ಬೀಜ ವಿತರಣೆಗೆ ಶಿವಮೊಗ್ಗ ತಾಲೂಕಿನ ರೈತರಿಂದ ಅರ್ಜಿ ಆಹ್ವಾನ
ಶಿವಮೊಗ್ಗ (shivamogga), ಜ. 18 : ತರಕಾರಿ ಬೀಜ ವಿತರಣೆಗೆ ಸಂಬಂಧಿಸಿದಂತೆ, ಶಿವಮೊಗ್ಗ ತಾಲೂಕಿನ ವಿವಿಧ ವರ್ಗಗಳ ರೈತರಿಂದ ತೋಟಗಾರಿಕೆ ಇಲಾಖೆಯು ಅರ್ಜಿ ಆಹ್ವಾನಿಸಿದೆ.
2024-25 ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯ ತರಕಾರಿ ಬೀಜಗಳ (ಹೈಬ್ರಿಡ್ ಹಾಗೂ ಸುಧಾರಿತ ತಳಿ) ವಿತರಣೆ ಕಾರ್ಯಕ್ರಮದಡಿ ತರಕಾರಿ ಬೀಜಗಳ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ತಾಲೂಕು ವ್ಯಾಪ್ತಿಯ, ತೋಟ-ಜಮೀನಿನಲ್ಲಿ ನೀರಾವರಿ ಸೌಲಭ್ಯ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತರಿಗೆ ತರಕಾಗಿ ಬೀಜ ವಿತರಿಸಲಾಗುತ್ತದೆ.
ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್, ಬ್ಯಾಂಕ್ ಪಾಸ್‌ಬುಕ್ ಮತ್ತು ಜಾತಿ ಪ್ರಮಾಣ ಪತ್ರವನ್ನು ಲಗತ್ತಿಸಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಶಿವಮೊಗ್ಗ ಇವರಿಗೆ ದಿ: 31-01-2025 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
Regarding the distribution of vegetable seeds, Horticulture Department has invited applications from various categories of farmers in Shimoga Taluk.
Applications are invited for the distribution of vegetable seeds under the program of distribution of vegetable seeds (hybrid and improved varieties) of the Integrated Horticulture Development Scheme for the year 2024-25.
Interested farmers can submit the application along with Pahani, Aadhaar, Bank Passbook and Caste Certificate to the Office of Senior Assistant Director of Horticulture, Shimoga by: 31-01-2025.
