shimoga | ಶಿವಮೊಗ್ಗ : ಖಾಸಗಿ ಬಸ್ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು!
ಶಿವಮೊಗ್ಗ (shivamogga), ಜ. 19: ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ, ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚಿನ್ಮನೆ ಗ್ರಾಮದಲ್ಲಿ ಜ. 19 ರಂದು ನಡೆದಿದೆ.
ಕುರುಂಬಳ್ಳಿ ಗ್ರಾಮದ ನಿವಾಸಿ ಮಂಜುನಾಥ್ (30) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಇವರು ಮಹಾರಾಷ್ಟ್ರದ ಪೂನಾದಲ್ಲಿ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.
ಆಯನೂರು ಕಡೆಯಿಂದ ಹೊಸನಗರದ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಆಯನೂರು ಕಡೆ ಆಗಮಿಸುತ್ತಿದ್ದ ಬೈಕ್ ನಡುವೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಸಬ್ ಇನ್ಸ್’ಪೆಕ್ಟರ್ ಶಾಂತರಾಜ್ ಸೇರಿದಂತೆ ಮತ್ತವರ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
ಬಸ್ ಚಾಲಕನ ಅಜಾಗರೂಕ, ನಿರ್ಲಕ್ಷ್ಯದ ಚಾಲನೆಯೇ ಅವಘಡಕ್ಕೆ ಕಾರಣವೆಂದು ತಿಳಿದುಬಂದಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
shimoga january : In a head-on collision between a private bus and a bike, the bike rider died on the spot at Chinmane village under Kunsi police station in Shimoga taluk on January 19.
Additional Superintendent of Police Anil Kumar Bhooma reddy, Sub-Inspector Shantraj and others visited the spot and inspected the spot.
The accident took place between a private bus going from Ayanur towards Hosanagar and a bike coming towards Ayanur.
