Shivamogga Municipal Corporation Shelter Department Officer Caught in Lokayukta Trap! ಶಿವಮೊಗ್ಗ ಮಹಾನಗರ ಪಾಲಿಕೆ ಆಶ್ರಯ ವಿಭಾಗದ ಅಧಿಕಾರಿ ಲೋಕಾಯುಕ್ತ ಬಲೆಗೆ!

shimoga | ಶಿವಮೊಗ್ಗ : ಲೋಕಾಯುಕ್ತ ಸಾರ್ವಜನಿಕ ಕುಂದುಕೊರತೆ ಸಭೆ – ಯಾವಾಗ? ಎಲ್ಲೆಲ್ಲಿ?

ಶಿವಮೊಗ್ಗ (shivamogga), ಜ. 20: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಸಂಸ್ಥೆಯಿಂದ ಸಾರ್ವಜನಿಕ ಕುಂದುಕೊರತೆ ಸಭೆ ಆಯೋಜಿಸಲಾಗಿದೆ ಎಂದು ಜ. 20 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಸಭೆಗಳಲ್ಲಿ ಭಾಗಿಯಾಗಲಿದ್ದಾರೆ. ಜನವರಿ 23, 24, 28 ಹಾಗೂ 29 ರಂದು ಬೆಳಿಗ್ಗೆ 11 ಗಂಟೆಯಿಂದ 12. 30 ರವರೆಗೆ ಸಾರ್ವಜನಿಕರ ಕುಂದು ಕೊರತೆಯ ಅರ್ಜಿ ಸ್ವೀಕಾರ ಸಭೆಗಳು ನಡೆಯಲಿವೆ.

ಸದರಿ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲನ್ನು ನೀಡಲು ಅವಕಾಶವಿದೆ. ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ಅನಗತ್ಯ ವಿಳಂಬ,

ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ಲಿಖಿತ ಅಹವಾಲು ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಭೆಗಳ ವಿವರ : ಜ.23 ರ ಬೆಳಿಗ್ಗೆ 11 ಗಂಟೆಯಿಂದ 12. 30 ರವರೆಗೆ ಸೊರಬ ಪಟ್ಟಣದ ತಾಲೂಕು ಕಚೇರಿ ಸಭಾಂಗಣ ಹಾಗೂ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ,

ಜ. 24 ರ ಬೆಳಿಗ್ಗೆ 11 ಗಂಟೆಯಿಂದ 12. 30 ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ ಹಾಗೂ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ,

ಜ. 28 ರ ಬೆಳಿಗ್ಗೆ 11 ಗಂಟೆಯಿಂದ 12. 30 ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ ಹೊಸನಗರ ಹಾಗೂ ಭದ್ರಾವತಿ ನಗರಸಭೆ ಸಭಾಂಗಣ,

ಜ. 29 ರ ಬೆಳಿಗ್ಗೆ 11 ಗಂಟೆಯಿಂದ 12. 30 ರವರೆಗೆ ಶಿವಮೊಗ್ಗ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಾಗುತ್ತದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

Shimoga : The body of an anonymous man was found in the channel water! ಶಿವಮೊಗ್ಗ : ಚಾನಲ್ ನೀರಿನಲ್ಲಿ ಅನಾಮಧೇಯ ಪುರುಷನ ಶವ ಪತ್ತೆ! Previous post shimoga | ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಪರಿಚಿತ ಮಹಿಳೆ ಸಾವು!
Shimoga Municipal Corporation Area Revision: Why the Negligence of the People's Representatives?! Reporter : B. Renukesh shimoga palike | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ಜನಪ್ರತಿನಿಧಿಗಳ ನಿರ್ಲಕ್ಷ್ಯವೇಕೆ?! Next post shimoga | ಬೆಂಗಳೂರು ಮಾದರಿ ಶಿವಮೊಗ್ಗದ ಮೂರು ಕಡೆ ಆರಂಭವಾಗಲಿವೆ ಪಾಲಿಕೆ ವಲಯ ಕಚೇರಿಗಳು!