Which trains will be affected? What is the Railway Department's announcement? ಯಾವೆಲ್ಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ? ರೈಲ್ವೆ ಇಲಾಖೆ ಪ್ರಕಟಣೆಯೇನು?

shimoga | ಶಿವಮೊಗ್ಗ– ಚಿಕ್ಕಮಗಳೂರು ಪ್ಯಾಸೆಂಜರ್ ರೈಲು ಸಂಚಾರದಲ್ಲಿ ವ್ಯತ್ಯಯ : ಯಾವಾಗ? ಕಾರಣವೇನು?

ಶಿವಮೊಗ್ಗ (shivamogga), ಜ. 21: ಕಡೂರು ಮತ್ತು ಬೀರೂರು ನಿಲ್ದಾಣದ ಯಾರ್ಡ್ ಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು – ಮರು ವೇಳಾಪಟ್ಟಿ ನಿಗದಿಗೊಳಿಸಲಾಗುತ್ತಿದೆ ಎಂದು ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ ಕನಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈಲುಗಳ ಭಾಗಶಃ ರದ್ದು:  ಜನವರಿ 25 ಮತ್ತು ಫೆಬ್ರವರಿ 1 ರಂದು ರೈಲು ಸಂಖ್ಯೆ 56271 ಶಿವಮೊಗ್ಗ ಟೌನ್-ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ ರೈಲು, ಬೀರೂರು ಮತ್ತು ಚಿಕ್ಕಮಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲಿನ ಸೇವೆ ಬೀರೂರಿನಲ್ಲಿ ಕೊನೆಗೊಳ್ಳಲಿದೆ.

ರೈಲುಗಳ ಮರು ವೇಳಾಪಟ್ಟಿ/ನಿಯಂತ್ರಣ: ಜನವರಿ 21 ಮತ್ತು ಫೆಬ್ರವರಿ 4 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 16213 ಅರಸೀಕೆರೆ – ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು ಅರಸೀಕೆರೆಯಿಂದ 75 ನಿಮಿಷ ತಡವಾಗಿ ಹೊರಡಲಿದೆ.

ಜನವರಿ 21 ಮತ್ತು ಫೆಬ್ರವರಿ 4 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 56906 ಎಸ್ಎಸ್ಎಸ್ ಹುಬ್ಬಳ್ಳಿ – ಸೋಲ್ಲಾಪುರ ಡೈಲಿ ಪ್ಯಾಸೆಂಜರ್ ರೈಲು. ಹುಬ್ಬಳ್ಳಿಯಿಂದ 75 ನಿಮಿಷ ತಡವಾಗಿ ಹೊರಡಲಿದೆ.

ಜನವರಿ 25 ಮತ್ತು ಫೆಬ್ರವರಿ 1 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 16214 ಎಸ್ಎಸ್ಎಸ್ ಹುಬ್ಬಳ್ಳಿ – ಅರಸೀಕೆರೆ ಡೈಲಿ ಎಕ್ಸ್ ಪ್ರೆಸ್ ರೈಲು, ಹುಬ್ಬಳ್ಳಿಯಿಂದ 75 ನಿಮಿಷ ತಡವಾಗಿ ಹೊರಡಲಿದೆ. ಮತ್ತು ಈ ರೈಲು ಮಾರ್ಗ ಮಧ್ಯ 60 ನಿಮಿಷ ನಿಯಂತ್ರಣವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Due to safety related maintenance work being carried out at Kadur and Birur railway station yards, some trains will be disrupted. Chief Public Relations Officer of Hubli South Western Railway Zone Dr. Manjunath Kanadi said in a release.

Partial Cancellation of Trains: Train No. 56271 Shimoga Town-Chikkamagaluru Daily Passenger Train is partially canceled between Birur and Chikkamagaluru stations on January 25 and February 1. The service of this train will end at Birur.

Shimoga Municipal Corporation Area Revision: Why the Negligence of the People's Representatives?! Reporter : B. Renukesh shimoga palike | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ಜನಪ್ರತಿನಿಧಿಗಳ ನಿರ್ಲಕ್ಷ್ಯವೇಕೆ?! Previous post shimoga | ಬೆಂಗಳೂರು ಮಾದರಿ ಶಿವಮೊಗ್ಗದ ಮೂರು ಕಡೆ ಆರಂಭವಾಗಲಿವೆ ಪಾಲಿಕೆ ವಲಯ ಕಚೇರಿಗಳು!
shimoga | Shimoga: Negligence of minor irrigation department – ​​drinking water is a disaster! shimoga | ಶಿವಮೊಗ್ಗ : ಸಣ್ಣ ನೀರಾವರಿ ಇಲಾಖೆ ನಿರ್ಲಕ್ಷ್ಯ – ಕುಡಿಯುವ ನೀರಿಗೆ ಹಾಹಾಕಾರ! Next post shimoga | ಶಿವಮೊಗ್ಗ : ಸಣ್ಣ ನೀರಾವರಿ ಇಲಾಖೆ ನಿರ್ಲಕ್ಷ್ಯ – ಕುಡಿಯುವ ನೀರಿಗೆ ಹಾಹಾಕಾರ!