
shimoga | ಶಿವಮೊಗ್ಗ ತಾಲೂಕು ಕಾಲೇಜ್ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಸುದ್ದಿ ಸುಳ್ಳು : ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ!
ಶಿವಮೊಗ್ಗ (shivamogga), ಜ. 23: ಶಿವಮೊಗ್ಗ ತಾಲೂಕಿನ ಕಾಲೇಜ್ ಗಳಲ್ಲಿ ಅಭ್ಯಾಸ ಮಾಡುತ್ತಿರುವ ಎಸ್ಸಿ – ಎಸ್ಟಿ ವರ್ಗದ ವಿದ್ಯಾರ್ಥಿಗಳಿಗೆ, ಇಲಾಖೆಯಿಂದ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಎಂಬುವುದು ಸುಳ್ಳು ಸುದ್ದಿಯಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.
ಈ ಕುರಿತಂತೆ ಜ. 23 ರಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಶಿವಮೊಗ್ಗ ನಗರದ ವಿದ್ಯಾನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿಯಿಂದ, ಶಿವಮೊಗ್ಗ ತಾಲೂಕಿನ ಕಾಲೇಜ್ ಗಳಲ್ಲಿ ಅಭ್ಯಾಸ ಮಾಡುತ್ತಿರುವ ಎಸ್ಸಿ – ಎಸ್ಟಿ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಎಂದು ಕೆಲ ಅನಾಮಧೇಯ ವ್ಯಕ್ತಿಗಳು ಹಾಗೂ ಮಧ್ಯವರ್ತಿಗಳು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಕರೆ ಮಾಡಿ ತಿಳಿಸುತ್ತಿದ್ದಾರೆ.
ಆದರೆ ಇದು ಸಂಪೂರ್ಣ ಸುಳ್ಳಾಗಿದೆ. ಇಂತಹ ಸುಳ್ಳು ಮಾಹಿತಿಗಳಿಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಿವಿಗೊಡಬಾರದು. ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
Shimoga, January 23: The Department of Social Welfare has clarified that it is a false news that the department is giving laptops to SC-ST students practicing in the colleges of Shimoga taluk.
About this J. On 23rd, Assistant Director of Social Welfare Department issued a press release.
Some anonymous persons and intermediaries are calling the students and the public to inform them that laptops are being given to the students of SC-ST category who are practicing in the colleges of Shimoga taluk from the social welfare department office of Vidya Nagar in Shimoga city.
But this is completely false. Students and public should not listen to such false information. Assistant Director of Shimoga Taluk Social Welfare Department informed in the announcement that the office can be contacted for more information.