
shimoga | ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಹಾಲಿನ ಖರೀದಿ ದರ ಹೆಚ್ಚಳ!
ಶಿವಮೊಗ್ಗ (shivamogga) ಜ. 31: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟ (ಶಿಮುಲ್) ವು ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಳ ಮಾಡಿದೆ. ಒಕ್ಕೂಟದ ಅಧ್ಯಕ್ಷ ಹೆಚ್.ಎನ್. ವಿದ್ಯಾಧರ ಅವರ ಅಧ್ಕ್ಷಕ್ಷತೆಯಲ್ಲಿ, ಜ.31 ರಂದು ನಡೆದ ಒಕ್ಕೂಟದ 453 ನೇ ಆಡಳಿತ ಮಂಡಳಿ ಸಭೆಯಲ್ಲಿ ದರ ಹೆಚ್ಚಳ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರತಿ ಲೀಟರ್ ಹಾಲಿಗೆ 2 ರೂ. ದರ ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ದರವು 01/02/2025 ರಿಂದ 31/03/2025ರವರೆಗೆ ಜಾರಿಯಲ್ಲಿರುತ್ತದೆ ಎಂದು ಜ. 31 ರಂದು ಶಿಮುಲ್ ಆಡಳಿತ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ, ಹಾಲು ಖರೀದಿ ದರವನ್ನು ಕಾಲಕಾಲಕ್ಕೆ ಪರಿಷ್ಕರಿಸಿಕೊಂಡು ಬರಲಾಗುತ್ತಿದೆ. ಬೇಸಿಗೆ ಹಂಗಾಮಿನಲ್ಲಿ ಹೈನುರಾಸುಗಳ ನಿರ್ವಹಣಾ ವೆಚ್ಚ ಅಧಿಕಾರವಾಗಿರುತ್ತದೆ.
ಉತ್ಪಾದನಾ ವೆಚ್ಚ ಹೆಚ್ಚಳವಾಗಿ ಲಾಭಾಂಶ ಕಡಿಮೆ ಆಗುವುದರಿಂದ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಿ, ಉತ್ತೇಜಿಸುವ ಸಲುವಾಗಿ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲು ಖರೀದಿ ದರ ಹೆಚ್ಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಒಕ್ಕೂಟದಿಂದ ಸಂಘಗಳಿಗೆ ಪ್ರಸ್ತುತ ಎಫ್ಎಟಿ 4.0%, ಎಸ್ಎನ್ಎಫ್ 8.50% ಇರುವ ಪ್ರತಿ ಕೆ.ಜಿ.ಹಾಲಿಗೆ 32. 09 ರೂ. ಇದ್ದು, ಪರಿಷ್ಕೃತ ದರದಿಂದ 34.18 ರೂ. ಆಗಲಿದೆ. ಹಾಗೆಯೇ ಸಂಘದಿಂದ ಉತ್ಪಾದಕರಿಗೆ ಪ್ರಸ್ತುತ ಎಫ್ಎಟಿ 4.0%, ಎಸ್ಎನ್ಎಫ್ 8.50% ಇರುವ ಪ್ರತಿ ಲೀಟರ್ ಹಾಲಿಗೆ 30.13 ರೂ. ಇದ್ದು, ಪರಿಷ್ಕೃತ ದರದಿಂದ 32.22 ರೂ. ಆಗಲಿದೆ ಎಂದು ತಿಳಿಸಿದೆ.
ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಹೆಚ್.ಎನ್.ವಿದ್ಯಾಧರ, ಉಪಾಧ್ಯಕ್ಷರಾದ ಚೇತನ್ ಎಸ್ ನಾಡಿಗರ ರವರು, ನಿರ್ದೇಶಕರುಗಳಾದ ಆರ್.ಎಂ.ಮಂಜುನಾಥ ಗೌಡ, ಡಿ.ಆನಂದ, ಜಗದೀಶಪ್ಪ ಬಣಕಾರ್, ಟಿ.ಶಿವಶಂಕರಪ್ಪ, ಜಿ.ಪಿ.ರೇವಣಸಿದ್ದಪ್ಪ, ಹೆಚ್.ಕೆ.ಬಸಪ್ಪ, ಹೆಚ್.ಬಿ.ದಿನೇಶ್, ಬಿ.ಜಿ.ಬಸವರಾಜಪ್ಪ ಬಿ.ಆರ್.ರವಿಕುಮಾರ್, ಬಿ.ಸಿ.ಸಂಜೀವ ಮೂರ್ತಿ, ಟಿ.ಎಸ್.ದಯಾನಂದ ಗೌಡ್ರು, ಜಿ.ಬಿ.ಶೇಖರಪ್ಪ, ಎಸ್. ಕುಮಾರ್ ಮೊದಲಾದವರಿದ್ದರು.
Shimoga January 31: Shimoga, Davangere and Chitradurga Milk Union (Shimul) has increased the price of milk purchased from farmers. Under the chairmanship of union president Vidyadhara, the decision to increase the rate was taken in the 453rd meeting of the governing body of the union held on January 31.
2 per liter of milk. The rate has been increased. The revised rate will be effective from 01/02/2025 to 31/03/2025. This was stated in a press release issued by the Shimul administration on 31st.