bhadra dam | ಭದ್ರಾ ಡ್ಯಾಂನಿಂದ ನದಿಗೆ ನೀರು : ಯಾವಾಗ? ಕಾರಣವೇನು?
ಶಿವಮೊಗ್ಗ (shivamogga),ಫೆ. 1: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಮೈಲಾರ ಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ ಪ್ರಯುಕ್ತ, ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ 05-02-2025 ರಿಂದ 11-02-2025 ರವರೆಗೆ 5800 ಕ್ಯೂಸೆಕ್ಸ್ ನೀರನ್ನು ಹರಿಸಲು ಆದೇಶಿಸಲಾಗಿದೆ.
ಈ ಸಂಬಂಧ ಫೆಬ್ರವರಿ 1 ರಂದು ಭದ್ರಾ ಯೋಜನಾ ವೃತ್ತ ಕಚೇರಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಪ್ರಾದೇಶಿಕ ಆಯುಕ್ತರ ಆದೇಶದನ್ವಯ, 05-02-2025 ರ ರಾತ್ರಿ 100 ಕ್ಯೂಸೆಕ್ಸ್ ನೀರು ಹರಿಸಲಾಗುತ್ತದೆ.
ತದನಂತರ 06-02-2025 ರಿಂದ 11-02-2025 ರವರೆಗೆ ಪ್ರತಿದಿನ 800 ಕ್ಯೂಸೆಕ್ ನಂತೆ ಒಟ್ಟು 5800 ಕ್ಯೂಸೆಕ್ ಪ್ರಮಾಣದ ನೀರನ್ನು ಭದ್ರಾ ನದಿಗೆ ಹರಿಸಲಾಗುವುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಮೇಲೆ ತಿಳಿಸಿದ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ.
ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್ ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಆರ್ ರವಿಚಂದ್ರ ತಿಳಿಸಿದ್ದಾರೆ.
Shimoga, February 1: On the occasion of Karnikotsava of Mylar Lingeshwara Swami of Mylar village of Susulahadagali taluk of Vijayanagara district during 2024-25, 5800 cusecs of water has been ordered to be released from Bhadra reservoir to Tungabhadra river from 05-02-2025 to 11-02-2025.
Bhadra Yojana Circle office issued a press release in this regard on February 1. As per order of Regional Commissioner, 100 cusecs of water will be released on night of 05-02-2025.
