
shimoga | ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ – ಫೆ. 11 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಫೆ. 10: ಶಿವಮೊಗ್ಗ ನಗರದ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ, ಫೆ 11 ರಂದು ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಕಾರಣದಿಂದ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಇಂದು ಮೆಸ್ಕಾಂ ಪ್ರಕಟಣೆ ಬಿಡುಗಡೆ ಮಾಡಿದೆ. ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ಮದರಿಪಾಳ್ಯ, ಊರುಗಡೂರು ಸರ್ಕಲ್, ಬೈಪಾಸ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shimoga, February 10: Road widening work has been started on February 11 in Mandli Power Distribution Center area of Shimoga city. Mescom informed that due to this there will be power failure in many places.
Mescom has released a notification in this regard today. It has been informed that there will be power interruption in the following areas from 10 am to 5 pm. There will be power interruption in Madaripalya, urgadur circle, Bypass Road and surrounding areas. Mescom has asked the public to cooperate.