
shimoga | ಪ್ರತಿ ಬಾಲ್ಯ ವಿವಾಹ ಪ್ರಕರಣವನ್ನು ‘ಹಾಟ್ ಸ್ಟಾಟ್’ ಎಂದು ಪರಿಗಣಿಸಿ : ಅಧಿಕಾರಿಗಳಿಗೆ ಶಿವಮೊಗ್ಗ ಡಿಸಿ ಸೂಚನೆ
ಶಿವಮೊಗ್ಗ (shivamogga), ಫೆ.11: ಜಿಲ್ಲೆಯಲ್ಲಿ ಎಲ್ಲೇ ಬಾಲ್ಯ ವಿವಾಹ ಪ್ರಕರಣ ನಡೆದರೂ ಅದನ್ನು ಹಾಟ್‌ಸ್ಪಾಟ್ ಎಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮುದಾಯವನ್ನೊಳಗೊಂಡ ಪರಿಣಾಮಕಾರಿ ಕ್ರಮ ಕೈಗೊಂಡು, ಶಾಶ್ವತ ಪರಿಹಾರಕ್ಕೆ ಒತ್ತು ನೀಡಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಒಂದು ಬಾಲ್ಯ ವಿವಾಹ ಪ್ರಕರಣವನ್ನು ಹಾಟ್‌ಸ್ಪಾಟ್ ಎಂದು ಪರಿಗಣನೆಗೆ ತೆಗೆದುಕೊಂಡು ಚಟುವಟಿಕೆ ಕೈಗೊಳ್ಳಬೇಕು. ಶಾಶ್ವತ ಪರಿಹಾರ ಒದಗುವಂತಹ ಕ್ರಮ ಕೈಗೊಳ್ಳಬೇಕು.
ಸ್ಥಳೀಯ ಮುಖಂಡರು, ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು ಮತ್ತು ಪ್ರಭಾವಿ ವ್ಯಕ್ತಿಗಳ ಸಹಾಯ ತೆಗೆದುಕೊಂಡು ಸಮುದಾಯದಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸುವಂತಾಗಬೇಕು. ಬಾಲ್ಯ ವಿವಾಹ ತಡೆಯುವಲ್ಲಿ ಶ್ರಮಿಸಿದ ಮುಖಂಡರು, ಪ್ರೇರಕರನ್ನು ಗೌರವಿಸಬೇಕು. ಸ್ಥಳೀಯವಾಗಿ ಕಾರ್ಯವೆಸಗುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಸದ್ಬಳಕೆ ಮಾಡಿಕೊಂಡು ಅವರನ್ನೂ ಗೌರವಿಸಬೇಕು.
ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಬಾಲ್ಯ ವಿವಾಹ ತಡೆ ಕಾರ್ಯದೊಂದಿಗೆ ಸಮುದಾಯಗಳಲ್ಲಿ ಶಾಶ್ವತವಾಗಿ ಬಾಲ್ಯ ವಿವಾಹ ತಡೆಯುವ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಹಾಗೂ ಪ್ರಾಥಮಿಕ ಹಂತದ ಶಾಲೆಗಳಿಂದ ಹಿಡಿದು ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರತಿ ದಿನ ಪೋಕ್ಸೋ ಮತ್ತು ಬಾಲ್ಯ ವಿವಾಹ ಜಾಗೃತಿ ಕುರಿತು ಪ್ರತಿಜ್ಞಾ ವಿಧಿ ಬೋಧನೆ, ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ಕಾರ್ಯಾಗಾರ ಸೇರಿದಂತೆ ಉತ್ತಮ ಫಲಿತಾಂಶ ಬರುವಂತಹ, ಶಾಶ್ವತ ಪರಿಹಾರ ಒದಗುವಂತಹ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲಾಡಳಿತದಿಂದ ಸಹ ಬಾಲ್ಯ ವಿವಾಹ ತಡೆಗೆ ಸಹಕರಿಸಿದ ಪ್ರೇರಕರು, ಮುಖಂಡರನ್ನು ಗೌರವಿಸಲಾಗುವುದು ಎಂದರು
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್, ಜಿಲ್ಲೆಯಲ್ಲಿ 2024 ರ ಏಪ್ರಿಲ್ ನಿಂದ ಡಿಸೆಂಬರ್ ಅಂತ್ಯದವರೆಗೆ ಬಾಲ್ಯ ವಿವಾಹದ ಬಗ್ಗೆ ಒಟ್ಟು 89 ದೂರುಗಳನ್ನು ಸ್ವೀಕರಿಸಲಾಗಿದ್ದು ಒಟ್ಟು 26 ಬಾಲ್ಯ ವಿವಾಹ ತಡೆಯಲಾಗಿದೆ. 63 ಬಾಲ್ಯ ವಿವಾಹ ನಡೆದಿದೆ.
ಬಾಲ್ಯ ವಿವಾಹ ತಡೆಯಲು ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ, ವಸತಿ ನಿಲಯಗಳಲ್ಲಿ ಮಕ್ಕಳ ಹಕ್ಕುಗಳು ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ಜಾಗೃತಿ ಕಾರ್ಯಕ್ರಮ, ವಿಶೇಷ ಗ್ರಾಮ ಸಭೆಗಳಲ್ಲಿ ಜಾಗೃತಿ, ಗೋಡೆ ಬರಹ, ರಕಷಣೆ ನೀಡಿದ ಮಕ್ಕಳಿಗೆ ಕೌಶಲ್ಯ ತರಬೇತಿ, ರಕ್ಷಣಾ ಕ್ರಮಗಳು ಮತ್ತು ಸಹಕಾರ ಸಂಘಗಳಿಂದ ಪೋಷಕರಿಗೆ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸುಜಾತಾ, ಡಿಹೆಚ್‌ಓ ಡಾ.ನಟರಾಜ್, ನಿರೂಪಣಾಧಿಕಾರಿ ಡಾ.ಸಂತೋಷ್ ಕುಮಾರ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ತಾಜುದ್ದೀನ್ ಖಾನ್, ತಾಲ್ಲೂಕುಗಳ ಸಿಡಿಪಿಓ, ಇತರೆ ಅಧಿಕಾರಿಗಳು ಹಾಜರಿದ್ದರು.
Shimoga, Feb 11: Wherever there is a case of child marriage in the district, it should be considered as a hotspot and necessary action should be taken. District Collector Gurudatta Hegde instructed the officials to take effective action involving the community and emphasize on permanent solution.
He was presiding over the progress review meeting of various programs of the Women and Child Development Department at the District Administration Office Hall on Tuesday. Every single case of child marriage should be considered as a hotspot and action should be taken. Action should be taken to provide a permanent solution.