shimoga | ಶಿವಮೊಗ್ಗ : ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

shimoga | Shimoga: Applications invited for the recruitment of Rural Postal Servants shimoga | ಶಿವಮೊಗ್ಗ : ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ (shivamogga), ಫೆ. 11: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಈ ಸಂಬಂಧ ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಫೆ. 11 ರಂದು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. 03-03-2025 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ವೆಬ್‌ಸೈಟ್ www.indiapostgdsonline.gov.in ಮೂಲಕವೇ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕು.

ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷ್‌ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು.

18 ರಿಂದ 40 ವರ್ಷ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಶಿವಮೊಗ್ಗ ಅಂಚೆ ವಿಭಾಗದಲ್ಲಿ 36 ಹುದ್ದೆಗಳು ಖಾಲಿ ಇರುತ್ತವೆ.

ಹೆಚ್ಚಿನ ಮಾಹಿತಿಗೆ ಆಯಾ ವಿಭಾಗದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು. ಶಿವಮೊಗ್ಗ ಅಂಚೆ ವಿಭಾಗದ ಸಂಪರ್ಕ ಸಂಖ್ಯೆ 08182-222516 ಆಗಿರುತ್ತದೆ ಎಂದು ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shimoga, Feb 11: Online applications are invited for the vacant posts of Branch Post Keeper, Assistant Branch Post Keeper and Dock Sevak in the Department of Posts.

In this regard, the Superintendent of Posts of Shimoga Post Division has issued a notification on February 11.

03-03-2025 is the last date to apply. Candidates should submit applications through website www.indiapostgdsonline.gov.in

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →