Shivamogga Municipal Corporation Shelter Department Officer Caught in Lokayukta Trap! ಶಿವಮೊಗ್ಗ ಮಹಾನಗರ ಪಾಲಿಕೆ ಆಶ್ರಯ ವಿಭಾಗದ ಅಧಿಕಾರಿ ಲೋಕಾಯುಕ್ತ ಬಲೆಗೆ!

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಸಾರ್ವಜನಿಕರ ಕುಂದು ಕೊರತೆ ಸಭೆ

ಶಿವಮೊಗ್ಗ, ಫೆ. 19: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು, ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಫೆಬ್ರವರಿ-2025ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ.

ಫೆ. 21 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಲಿದೆ.

ಫೆ. 24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ.

ಫೆ.25 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ,

ಭದ್ರಾವತಿ ನಗರಸಭೆ ಸಭಾಂಗಣ, ಫೆ.28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.

ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Shimoga, Feb 19: The district officials of Karnataka Lokayukta Police Division will hold a meeting to accept Deficiency applications from the public on the following days of the month of February-2025 in various taluks of the district.

Deputy Superintendent of Police, Karnataka Lokayukta, Shimoga said that the public should file a written complaint against the officers and staff who are irresponsible to perform government duties, neglect, undue delay and demand bribe for official work.

Shivamogga: Power outage in various places on July 20 th! ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ! Previous post shimoga | ಶಿವಮೊಗ್ಗ ನಗರದ ವಿವಿಧೆಡೆ ಫೆ. 20 ರಂದು ವಿದ್ಯುತ್ ವ್ಯತ್ಯಯ!
Shimoga Municipal Corporation Area Revision: Why the Negligence of the People's Representatives?! Reporter : B. Renukesh shimoga palike | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ಜನಪ್ರತಿನಿಧಿಗಳ ನಿರ್ಲಕ್ಷ್ಯವೇಕೆ?! Next post shimoga | ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ ಅನದಿಕೃತ ಬಡಾವಣೆಗಳ ನಿವೇಶನ, ಕಟ್ಟಡಗಳಿಗೆ ಸಿಗಲಿದೆ ಬಿ – ಖಾತಾ : ನಿಯಮಗಳೇನು?