
shiralkoppa | ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯ ನಾಗರಿಕರ ಗಮನಕ್ಕೆ : ಎ ಮತ್ತು ಬಿ ಖಾತಾಕ್ಕೆ ಅರ್ಜಿ ಸಲ್ಲಿಸಲು ಸೂಚನೆ!
ಶಿಕಾರಿಪುರ (shikaripur), ಫೆ. 20: ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪುರಸಭೆ ಕಚೇರಿಯನ್ನು ಸಂಪರ್ಕಿಸುವಂತೆ ಶಿರಾಳಕೊಪ್ಪ ಪುರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.
ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ಮೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿAದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ.
ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವುದು.
ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ: 10/09/2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು.
ಈ ಪ್ರಕಟಣೆ ದಿನಾಂಕದಿಂದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿರಾಳಕೊಪ್ಪ ಪುರಸಭೆ ಕಚೇರಿಯ ಸಹಾಯವಾಣಿ ಸಂ.: 08187-200147ನ್ನು ಅಥವಾ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವುದು.
shiralakoppa municipality announcement : Shikaripura, Feb 20 : In the Shiralakoppa municipal area, it is allowed to give b khata to the plots/buildings constructed in unauthorized settlements till the end of 10/09/2024.
b khata can be obtained by submitting the documents within three months from the date of this publication. For more information contact Shiralakoppa Municipal Office Helpline No.: 08187-200147 or contact the office in person.