
bhadravati | ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ! : ಕಾರಣವೇನು?
ಶಿವಮೊಗ್ಗ (shimoga), ಫೆ. 26: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನೋರ್ವನಿಗೆ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ – 1 ನ್ಯಾಯಾಧೀಶರು, 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಭದ್ರಾವತಿ ನಗರದ 19 ವರ್ಷದ ಯುವಕನೇ 20 ವರ್ಷ ಕಠಿಣ ಜೈಲು ಶಿಕ್ಷೆಗೆ ಗುರಿಯಾದವನು. ಶಿಕ್ಷೆಯ ಜೊತೆಗೆ 2,01,000 ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 1 ವರ್ಷ ಸಾದಾ ಕಾರಾಗೃಹ ವಾಸದ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ದಂಡದ ಮೊತ್ತದಲ್ಲಿ ಪರಿಹಾರವಾಗಿ 2 ಲಕ್ಷ ರೂ. ಹಾಗೂ ಸರ್ಕಾರದಿಂದ 2 ಲಕ್ಷ ರೂ.ಗಳನ್ನು ನೊಂದ ಬಾಲಕಿಗೆ ನೀಡುವಂತೆ, 24-2-2025 ರಂದು ನ್ಯಾಯಾಧೀಶರು ನೀಡಿದ ತೀರ್ಪಿನಲ್ಲಿ ಸೂಚಿಸಿದ್ದಾರೆ.
ನ್ಯಾಯಾಧೀಶರಾದ ಮೋಹನ್ ಜೆ ಎಸ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಹೆಚ್ ಆರ್ ಅವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ : 2022 ನೇ ಸಾಲಿನಲ್ಲಿ 15 ವರ್ಷದ ಬಾಲಕಿಯ ಮೇಲೆ, ಪ್ರಸ್ತುತ ಶಿಕ್ಷೆಗೊಳಗಾದ ಯುವಕನು ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಸಂಬಂಧ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಐಪಿಸಿಯ ವಿವಿಧ ಕಲಂಗಳು ಹಾಗು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಅಂದು ನ್ಯೂ ಟೌನ್ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್’ಪೆಕ್ಟರ್ ಆಗಿದ್ದ ರಾಘವೇಂದ್ರ ಕಾಂಡಿಕೆ ಅವರು ಪ್ರಕರಣದ ತನಿಖೆ ನಡೆಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ದಾಖಲಿಸಿದ್ದರು.
Shimoga, February 26: The judge of Additional District and Sessions Court FTSC-1 of Shimoga has sentenced a young man to 20 years rigorous imprisonment for sexually assaulting a minor girl. A 19-year-old youth from Bhadravati Nagar was sentenced to 20 years rigorous imprisonment. 2,01,000 as fine was imposed in addition to the punishment. In case of failure to pay the fine, the judge has ordered an additional 1 year simple imprisonment.