
shimoga | ಶಿವಮೊಗ್ಗ : ವಿಶೇಷ ಕಾರ್ಯಾಚರಣೆಯಲ್ಲಿ ಭಾಗಿಯಾದ ಎಸ್ಪಿ, ಎಎಸ್ಪಿ!
ಶಿವಮೊಗ್ಗ (shivamogga), ಫೆ. 28: ಅಪಘಾತಗಳ ನಿಯಂತ್ರಣಕ್ಕಾಗಿ, ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ವಿಶೇಷ ಕಾರ್ಯಾಚರಣೆಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸರು ಮುಂದುವರಿಸಿದ್ದಾರೆ. ಫೆ. 27 ರಂದು ಜಿಲ್ಲೆಯ ವಿವಿಧೆಡೆ ನೂರಾರು ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸಿದ್ದಾರೆ.
ಅಪಘಾತಗಳ ನಿಯಂತ್ರಣ ಹಾಗೂ ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ, ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ಕಾರ್ಯಾಚರಣೆಯನ್ನು ಜಿಲ್ಲೆಯಾದ್ಯಂತ ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಗುರುವಾರ ಶಿಕಾರಿಪುರ ಪಟ್ಟಣದ ಎಪಿಎಂಸಿ ಬಳಿ ನಡೆದ ಕಾರ್ಯಾಚರಣೆಯಲ್ಲಿ, ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಹಾಗೂ ಹೆಚ್ಚುವರಿ ಎಸ್ಪಿ ಎ ಜಿ ಕಾರಿಯಪ್ಪ ಅವರು ಭಾಗಿಯಾಗಿದ್ದರು. ಇದೇ ವೇಳೆ ವಾಹನಗಳಿಗೆ ಅಳವಡಿಸಿದ್ದ ಕರ್ಕಶ ಶಬ್ದ ಹೊರಹೊಮ್ಮುವ ಧ್ವನಿವರ್ಧಕಗಳನ್ನು ತೆರವುಗೊಳಿಸಿದರು. ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದರು.
ಇಲ್ಲಿಯವರೆಗೂ ಶಿವಮೊಗ್ಗ – ಬಿ ಉಪ ವಿಭಾಗದಲ್ಲಿ – 139, ಭದ್ರಾವತಿ ಉಪ ವಿಭಾಗದಲ್ಲಿ – 243, ಸಾಗರ ಉಪ ವಿಭಾಗದಲ್ಲಿ – 149, ಶಿಕಾರಿಪುರ ಉಪ ವಿಭಾಗದಲ್ಲಿ –166 ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ –22 ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟಾರೆ 719 ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಗಳನ್ನು ಅಂಟಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ರಾತ್ರಿ ವೇಳೆ ಸರಕು ಸಾಗಾಣೆ ವಾಹನಗಳು, ಲಾರಿ, ಟ್ರ್ಯಾಕ್ಟರ್ ಸೇರಿದಂತೆ ಭಾರೀ ವಾಹನಗಳ ಗೋಚರತೆ ಹೆಚ್ಚಿಸಲು ಸದರಿ ವಿಶೇಷ ಕಾರ್ಯಾಚರಣೆಯನ್ನು ಜಿಲ್ಲೆಯಾದ್ಯಂತ ನಡೆಸಲಾಗುತ್ತಿದೆ. ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವುದರಿಂದ, ಚಾಲಕರಿಗೆ ಮುಂದೆ ಹೋಗುತ್ತಿರುವ ಹಾಗೂ ಮುಂಭಾಗದಿಂದ ಆಗಮಿಸುವ ವಾಹನಗಳ ಗೋಚರತೆ ಹೆಚ್ಚಾಗುತ್ತದೆ.
ಇದರಿಂದ ವಾಹನಗಳ ಅಸ್ಪಷ್ಟ ಗೋಚರತೆಯಿಂದ ಉಂಟಾಗಬಹುದಾದ ಅಪಘಾತಗಳ ನಿಯಂತ್ರಣ ಸಾಧ್ಯವಾಗುತ್ತದೆ. ಈ ಕಾರಣದಿಂದ ಪ್ರತಿಯೊಂದು ವಾಹನಗಳ ಚಾಲಕರು, ತಮ್ಮ ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸಬೇಕು. ಸಂಚಾರಿ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.
Shimoga, Feb 28: In order to control accidents, the police has continued a special operation of pasting reflector stickers on vehicles. On January 27, reflector stickers were pasted on hundreds of vehicles in different parts of the district. In order to control accidents and in the interest of public safety, the police department said that the operation of pasting reflector stickers on vehicles is being conducted across the district.
SPG K Mithun Kumar and ASP AG Cariappa were involved in the operation near APMC in Shikaripura town on Thursday. At the same time, they removed the loudspeakers that were installed in the vehicles that were making hoarse noise. they created awareness about traffic rules.