shimoga | Shimoga: 2nd day of water supply workers' strike – KS Eshwarappa visits! shimoga | ಶಿವಮೊಗ್ಗ : ನೀರು ಸರಬರಾಜು ನೌಕರರ ಮುಷ್ಕರ 2 ನೇ ದಿನಕ್ಕೆ –  ಕೆ ಎಸ್ ಈಶ್ವರಪ್ಪ ಭೇಟಿ!

shimoga | ಶಿವಮೊಗ್ಗ : ನೀರು ಸರಬರಾಜು ನೌಕರರ ಮುಷ್ಕರ 2 ನೇ ದಿನಕ್ಕೆ –  ಕೆ ಎಸ್ ಈಶ್ವರಪ್ಪ ಭೇಟಿ!

ಶಿವಮೊಗ್ಗ (shivamogga), ಮಾ. 4: ನೇರ ನೇಮಕಾತಿಗೆ ಆಗ್ರಹಿಸಿ, ಶಿವಮೊಗ್ಗ ಮಹಾನಗರ ಪಾಲಿಕೆ ಹೊರಗುತ್ತಿಗೆ ನೀರು ಸರಬರಾಜು ನೌಕರರು ಜಲ ಮಂಡಳಿ ಕಚೇರಿ ಆವರಣದಲ್ಲಿ ಮಾರ್ಚ್ 3 ರಿಂದ ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಈ ನಡುವೆ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಹಾಗೂ ಅವರ ಪುತ್ರ ಕೆ ಇ ಕಾಂತೇಶ್ ಅವರು, ಮಂಗಳವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ನೌಕರರ ಅಹವಾಲು ಆಲಿಸಿದರು. ನೌಕರರ ಬೇಡಿಕೆ ಕುರಿತಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಕೆ ಎಸ್ ಈಶ್ವರಪ್ಪ ಅವರು ಭರವಸೆ ನೀಡಿದ್ದಾರೆ.

ಬೇಡಿಕೆಯೇನು? : ಪಾಲಿಕೆಯಲ್ಲಿ ಕಳೆದ ಸರಿಸುಮಾರು 15 ರಿಂದ 20 ವರ್ಷಗಳಿಂದ, 116 ನೌಕರರು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಇದರಲ್ಲಿ ನೀರುಗಂಟಿ, ನೀರು ಸರಬರಾಜು ಸಹಾಯಕರಾಗಿ ವಿವಿಧ ವೃಂದದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.

ಸರ್ಕಾರವು ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ / ನೇರ ಪಾವತಿ ವ್ಯವಸ್ಥೆಯಡಿ ನೇಮಿಸಿಕೊಳ್ಳಲು, ಜಿಲ್ಲಾ ನಗರಾಭಿವೃದ್ದಿ ಕೋಶದಿಂದ ಮಾಹಿತಿ ಪಡೆದುಕೊಂಡಿದೆ. ಆದರೆ ಇಲ್ಲಿಯವರೆಗೂ ಆದೇಶವಾಗಿಲ್ಲ. ಕೇವಲ ಕಡತಗಳಿಗಷ್ಟೆ ಸೀಮಿತವಾಗಿದೆ ಎಂದು ಸಂಘಟನೆ ಅಸಮಾಧಾನ ವ್ಯಕ್ತಪಡಿಸಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಮಾರ್ಚ್ 3 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಸ್ಥಗಿತಗೊಳಿಸುವುದಿಲ್ಲ ಎಂದು ಪ್ರತಿಭಟನಾಕಾರರು ಸ್ಪಷ್ಟಪಡಿಸಿದ್ದಾರೆ.

Shimoga, March 4: Demanding direct recruitment, Shimoga Municipal Corporation’s outsourced water supply employees entered the second day on Tuesday on their indefinite strike, which began on March 3 at the water board office premises.

Former DCM KS Eshwarappa and his son KE Kantesh visited the protest site on Tuesday. Heard the grievances of the employees. He promised to discuss the demand of the employees with the concerned department officials. #shimoganews, #shivamogganews, #shimoga news, #shivamogga news,

Shimoga | Shimoga Municipality area revision: Will the DC pay attention? shimoga | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ಗಮನಹರಿಸುವರೆ ಜಿಲ್ಲಾಧಿಕಾರಿ? Previous post shimoga | ಇ – ಖಾತಾ ಅಭಿಯಾನ : ಅಧಿಕಾರಿಗಳಿಗೆ ಶಿವಮೊಗ್ಗ ಡಿಸಿ ಖಡಕ್ ಎಚ್ಚರಿಕೆ!
A young woman gave birth to a child near the Chandragutti temple! ಚಂದ್ರಗುತ್ತಿ ದೇವಾಲಯ ಬಳಿಯೇ ಮಗುವಿಗೆ ಜನ್ಮವಿತ್ತ ಯುವತಿ! Next post soraba | ಸೊರಬ : ಚಂದ್ರಗುತ್ತಿ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧ!