Shimoga: Water supply workers' protest for 3rd day - Officials not visiting the place! shimoga | ಶಿವಮೊಗ್ಗ : ಅಹೋರಾತ್ರಿ ಪ್ರತಿಭಟನೆ 3 ನೇ ದಿನಕ್ಕೆ – ಸ್ಥಳಕ್ಕೆ ಭೇಟಿ ನೀಡದ ಅಧಿಕಾರಿಗಳು!

shimoga | ಶಿವಮೊಗ್ಗ : ಅಹೋರಾತ್ರಿ ಪ್ರತಿಭಟನೆ 3 ನೇ ದಿನಕ್ಕೆ – ಸ್ಥಳಕ್ಕೆ ಭೇಟಿ ನೀಡದ ಅಧಿಕಾರಿಗಳು!

ಶಿವಮೊಗ್ಗ (shivamogga), ಮಾ 4: ನೇರ ನೇಮಕಾತಿಗೆ ಆಗ್ರಹಿಸಿ, ಶಿವಮೊಗ್ಗ ಮಹಾನಗರ ಪಾಲಿಕೆ ಹೊರಗುತ್ತಿಗೆ ನೀರು ಸರಬರಾಜು ನೌಕರರು ನಗರದ ಜಲ ಮಂಡಳಿ ಕಚೇರಿ ಆವರಣದಲ್ಲಿ ಮಾರ್ಚ್ 3 ರಿಂದ ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರ ಬುಧವಾರ 3 ನೇ ದಿನಕ್ಕೆ ಕಾಲಿಟ್ಟಿದೆ.

ಕಳೆದ ಮೂರು ದಿನಗಳಿಂದ ನೌಕರರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದು, ಬೇಡಿಕೆ ಈಡೇರುವವರೆಗೂ ಮುಷ್ಕರ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಈ ನಡುವೆ ಮಹಾನಗರ ಪಾಲಿಕೆಯ ಯಾವೊಬ್ಬ ಅಧಿಕಾರಿಯು, ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೌಕರರ ಅಹವಾಲು ಆಲಿಸಿಲ್ಲ. ಇದು ಪ್ರತಿಭಟನಾಕಾರರು ಆಕ್ರೋಶಕ್ಕೆ ಕಾರಣವಾಗಿದೆ.

ನಾಗರೀಕರಿಗೆ ತೊಂದರೆಯಾಗದಿರಲೆಂದು ಪ್ರತಿಭಟನೆಯ ನಡುವೆಯೂ ನೀರು ಪೂರೈಕೆ ಮಾಡಲಾಗುತ್ತಿದೆ. ಮೂರು ದಿನಗಳಿಂದ ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದರೂ, ಸೌಜನ್ಯಕ್ಕಾದರೂ ಪಾಲಿಕೆಯ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ನಮ್ಮಗಳ ಅಹವಾಲು ಆಲಿಸಿಲ್ಲ. ಮನವಿ ಸ್ವೀಕರಿಸಿಲ್ಲ ಎಂದು ಪ್ರತಿಭಟನಾನಿರತ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೇಡಿಕೆಯೇನು? : ಪಾಲಿಕೆಯಲ್ಲಿ ಕಳೆದ ಸರಿಸುಮಾರು 15 ರಿಂದ 20 ವರ್ಷಗಳಿಂದ, 116 ನೌಕರರು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಇದರಲ್ಲಿ ನೀರುಗಂಟಿ, ನೀರು ಸರಬರಾಜು ಸಹಾಯಕರಾಗಿ ವಿವಿಧ ವೃಂದದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.

ಸರ್ಕಾರವು ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ / ನೇರ ಪಾವತಿ ವ್ಯವಸ್ಥೆಯಡಿ ನೇಮಿಸಿಕೊಳ್ಳಲು, ಈ ಹಿಂದೆಯೇ ಜಿಲ್ಲಾ ನಗರಾಭಿವೃದ್ದಿ ಕೋಶದಿಂದ ಮಾಹಿತಿ ಪಡೆದುಕೊಂಡಿದೆ. ಆದರೆ ಇಲ್ಲಿಯವರೆಗೂ ಆದೇಶವಾಗಿಲ್ಲ. ಕೇವಲ ಕಡತಗಳಿಗಷ್ಟೆ ಸೀಮಿತವಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ. ಸರ್ಕಾರ ನಮ್ಮಗಳ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಕ್ರಮಕೈಗೊಳ್ಳಬೇಕು. ಈ ಮೂಲಕ ನೆಮ್ಮದಿಯುತ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Shimoga, March 4: The indefinite strike by Shimoga Municipal Corporation outsourced water supply employees at the city’s water board office premises, which began on March 3, entered its third day on Wednesday, demanding direct recruitment.

The employees have been protesting round the clock for the past three days and have insisted that they will not give up their strike until their demands are met. Meanwhile, no official of the Municipal Corporation visited the protest site and listened to the grievances of the employees. This has angered the protesters.

shimoga | bird flu : What are the precautionary measures taken in Shimoga district? shimoga | ಹಕ್ಕಿಜ್ವರ : ಶಿವಮೊಗ್ಗ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆ ಕ್ರಮಗಳೇನು? Previous post shimoga | ಹಕ್ಕಿಜ್ವರ : ಶಿವಮೊಗ್ಗ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆ ಕ್ರಮಗಳೇನು?
shimoga | Shimoga: Problem solved by the efforts of MLA DS Arun! shimoga | ಶಿವಮೊಗ್ಗ : ಶಾಸಕ ಡಿ ಎಸ್ ಅರುಣ್ ಪ್ರಯತ್ನದಿಂದ ಬಗೆಹರಿದ ಸಮಸ್ಯೆ! Next post shimoga | ಶಿವಮೊಗ್ಗ : ಶಾಸಕ ಡಿ ಎಸ್ ಅರುಣ್ ಪ್ರಯತ್ನದಿಂದ ಬಗೆಹರಿದ ಸಮಸ್ಯೆ!