
shimoga | ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಲಿರುವ ಉಪ ಲೋಕಾಯುಕ್ತರು, ಯಾವಾಗ? ಎಲ್ಲಿ?
ಶಿವಮೊಗ್ಗ (shivamogga), ಮಾ. 8: ಕರ್ನಾಟಕ ಉಪ ಲೋಕಾಯುಕ್ತ ನ್ಯಾ. ಕೆ.ಎನ್.ಫಣೀಂದ್ರ ಅವರು, ಮಾ. 18 ರಿಂದ 21 ರವರೆಗೆ ಶಿವಮೊಗ್ಗ ನಗರದಲ್ಲಿ ಪ್ರವಾಸ ನಡೆಸಲಿದ್ದಾರೆ. ಈ ವೇಳೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಇದೇ ಅವಧಿಯಲ್ಲಿ ವಿವಿಧ ಸಭೆ – ಸಮಾರಂಭ. ತರಬೇತಿ ಕಾರ್ಯಾಗಾರಗಳು, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಈ ಕುರಿತಂತೆ ಲೋಕಾಯುಕ್ತ ಇಲಾಖೆಯ ಪೊಲೀಸ್ ಅಧೀಕ್ಷಕ ಮಂಜುನಾಥ್ ಚೌಧರಿ ಎಂ ಹೆಚ್ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಮಾ.18 ರಂದು ಸಂಜೆ 7.40 ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಮಾ.19 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬನೆಯಾಗಿದ್ದಲ್ಲಿ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ 1 ಮತ್ತು 2 ರಲ್ಲಿ ಲಿಖಿತವಾಗಿ ದಾಖಲೆ, ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಮಾ. 20 ರಂದು ಬೆಳಿಗ್ಗೆ 11 ರಿಂದ 11.30 ರವರೆಗೆ, ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ನಜೀರ್ ಸಾಬ್ ಸಭಾಂಗಣದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ಪ್ರಕರಣಗಳ ತನಿಖೆ / ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಪರಿಹರಿಸುವ ಕುರಿತು ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಲದ್ದಾರೆ.
ಈ ಸಮಯದಲ್ಲಿ ದೂರುದಾರರು ಮತ್ತು ಎದುರುದಾರರ ಹಾಜರಿದ್ದು ಇದರ ಸದುಪಯೋಗಪಡೆದುಕೊಳ್ಳುವಂತೆ ಶಿವಮೊಗ್ಗ ಲೋಕಾಯುಕ್ತ ಇಲಾಖೆಯ ಪೊಲೀಸ್ ಅಧೀಕ್ಷಕ ಮಂಜುನಾಥ ಚೌದರಿ ಎಂ. ಹೆಚ್. ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Shivamogga, Mar 8: Karnataka Deputy Lokayukta Justice K.N. Phanindra will be touring Shivamogga city from Mar 18 to 21. During this time, he will receive complaints from the public. During this period, he will participate in various meetings, events, training workshops and consultation meetings.