
shimoga | ಶಿವಮೊಗ್ಗ ಪಾಲಿಕೆ ನೀರು ಸರಬರಾಜು ಹೊರಗುತ್ತಿಗೆ ನೌಕರರ ಮುಷ್ಕರ ಅಂತ್ಯ!
ಶಿವಮೊಗ್ಗ (shivamogga), ಮಾ 8: ನೇರ ನೇಮಕಾತಿಗೆ ಆಗ್ರಹಿಸಿ, ಶಿವಮೊಗ್ಗ ಮಹಾನಗರ ಪಾಲಿಕೆ ಹೊರಗುತ್ತಿಗೆ ನೀರು ಸರಬರಾಜು ನೌಕರರು, ನಗರದ ಜಲ ಮಂಡಳಿ ಕಚೇರಿ ಆವರಣದಲ್ಲಿ ಮಾರ್ಚ್ 3 ರಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮಾ. 8 ರಂದು ತೆರೆ ಬಿದ್ದಿದೆ.
ಶಾಸಕ ಚನ್ನಬಸಪ್ಪ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿಯಿತ್ತು ನೌಕರರ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಪ್ರಸ್ತುತ ವಿಧಾನಸಭೆ ಅಧಿವೇಶನದಲ್ಲಿ ಹೋರಾಟದ ಪ್ರಸ್ತಾಪ ಮಾಡಲಾಗಿದೆ. ನಗರಾಭಿವೃದ್ದಿ ಸಚಿವರು ನೇರ ಪಾವತಿ ಕುರಿತಂತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದರು.
ನಿಮ್ಮ ನ್ಯಾಯಯುತ ಬೇಡಿಕೆಗೆ ತಮ್ಮ ಬೆಂಬಲವೂ ಇದೆ. ಮತ್ತೊಮ್ಮೆ ಸಚಿವರನ್ನು ಭೇಟಿಯಾಗಿ ಚರ್ಚಿಸೋಣ. ಪ್ರಸ್ತುತ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಕೈಬಿಡಿ. ಮುಂದಿನ ದಿನಗಳಲ್ಲಿ ಸರ್ಕಾರ ಕೈಗೊಳ್ಳುವ ನಿರ್ಧಾರ ಗಮನಿಸಿ ತೀರ್ಮಾನ ಕೈಗೊಳ್ಳಿ ಎಂದು ಶಾಸಕರು ಸಲಹೆ ನೀಡಿದರು.
ಶಾಸಕರ ಸಲಹೆಯ ಹಿನ್ನೆಯಲ್ಲಿ ನೌಕರರು ಕಳೆದ 6 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ ಸ್ಥಗಿತಗೊಳಿಸುವ ನಿರ್ಧಾರ ಪ್ರಕಟಿಸಿದ್ದಾರೆ.
ಬೇಡಿಕೆಯೇನು? : ಪಾಲಿಕೆಯಲ್ಲಿ ಕಳೆದ ಸರಿಸುಮಾರು 15 ರಿಂದ 20 ವರ್ಷಗಳಿಂದ, 116 ನೌಕರರು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಇದರಲ್ಲಿ ನೀರುಗಂಟಿ, ನೀರು ಸರಬರಾಜು ಸಹಾಯಕರಾಗಿ ವಿವಿಧ ವೃಂದದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.
ಸರ್ಕಾರವು ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ / ನೇರ ಪಾವತಿ ವ್ಯವಸ್ಥೆಯಡಿ ನೇಮಿಸಿಕೊಳ್ಳಲು, ಈ ಹಿಂದೆಯೇ ಜಿಲ್ಲಾ ನಗರಾಭಿವೃದ್ದಿ ಕೋಶದಿಂದ ಮಾಹಿತಿ ಪಡೆದುಕೊಂಡಿದೆ. ಆದರೆ ಇಲ್ಲಿಯವರೆಗೂ ಆದೇಶವಾಗಿಲ್ಲ. ಕೇವಲ ಕಡತಗಳಿಗಷ್ಟೆ ಸೀಮಿತವಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದರು.
ತಕ್ಷಣವೇ ರಾಜ್ಯ ಸರ್ಕಾರ ನೌಕರರ ನೇರ ನೇಮಕಾತಿ ಮಾಡಿಕೊಳ್ಳಬೇಕು. ಅಲ್ಲಿಯವರೆಗೂ ನೇರ ಪಾವತಿಯಡಿ ವೇತನ ನೀಡಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದರು.
Shivamogga, March 8: The indefinite strike, which was being held by the outsourced water supply employees of the Shivamogga Municipal Corporation at the city’s Water Board office premises since March 3, demanding direct recruitment, ended on March 8.
MLA Channabasappa visited the protest site and held talks with the employees. Speaking on the occasion, he said that a protest has been proposed in the current assembly session. The Urban Development Minister said that a decision will be taken after discussing the direct payment.