Shimoga : The body of an anonymous man was found in the channel water! ಶಿವಮೊಗ್ಗ : ಚಾನಲ್ ನೀರಿನಲ್ಲಿ ಅನಾಮಧೇಯ ಪುರುಷನ ಶವ ಪತ್ತೆ!

shimoga | ಶಿವಮೊಗ್ಗ : ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಪುರುಷರ ಶವ ಪತ್ತೆ!

ಶಿವಮೊಗ್ಗ (shivamogga), ಮಾ. 10: ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಪುರುಷರ ಶವಗಳು ಪತ್ತೆಯಾಗಿರುವ ಘಟನೆ ನಡೆದಿದೆ. ವಾರಸುದಾರರ ಪತ್ತೆಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.

ಕೋಟೆ ಪೊಲೀಸ್ ಠಾಣೆ ಪ್ರಕಟಣೆ : ಶಿವಮೊಗ್ಗ ನಗರದ ಹೊಳೆಹೊನ್ನೂರು ರಸ್ತೆಯ ಭೈರವ ವೈನ್ ಶಾಪ್ ಹತ್ತಿರ ಅಸ್ವಸ್ಥನಾಗಿ ಮಲಗಿದ್ದ ಸುಮಾರು 60 ರಿಂದ 65 ವಯಸ್ಸಿನ ವ್ಯಕ್ತಿಯನ್ನು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು ವ್ಯಕ್ತಿ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಸುಮಾರು 5 ಅಡಿ 5 ಇಂಚು ಎತ್ತರ, ಕಪ್ಪು ಮೈ ಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ, ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪು-ಬಿಳಿ ಬಣ್ಣದ ಕೂದಲು, 3 ಇಂಚು ಉದ್ದದ ಕಪ್ಪು-ಬಿಳಿ ಬಣ್ಣದ ಕುರುಚಲು ಗಡ್ಡ ಇದೆ.

ಹಣೆಯ ಮಧ್ಯ ಭಾಗದಲ್ಲಿ ಸಾಸಿವೆ ಕಾಳು ಗಾತ್ರದ ಕಪ್ಪು ಮಚ್ಚೆ ಹಾಗೂ ಮೈ ಮೇಲೆ ಬಿಳಿ ಮಾಸಲು ಬಣ್ಣದ ತುಂಬು ತೋಳಿನ ಶರ್ಟ್ ಧರಿಸಿದ್ದಾರೆ. ಸದರಿ ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಕೋಟೆ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈಲ್ವೆ ಪೊಲೀಸ್ ಠಾಣೆ ಪ್ರಕಟಣೆ : ತರೀಕೆರೆ ಮತ್ತು ಮಸರಹಳ್ಳಿಯ ರೈಲು ನಿಲ್ದಾಣಗಳ ನಡುವೆ 14-09-2024 ರಂದು ಸುಮಾರು 50 ರಿಂದ 55 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿರುತ್ತಾನೆಂದು ವರದಿ ಮಾಡಲಾಗಿದೆ.

ಮೃತ ವ್ಯಕ್ತಿಯು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈ ಬಣ್ಣ, ತಲೆಯಲ್ಲಿ ಸುಮಾರು 2 ಇಂಚು ಕಪ್ಪು ಮತ್ತು ಬಿಳಿ ಮಿಶ್ರಿತ ತಲೆಕೂದಲು ಹಾಗೂ ಕುರುಚಲು ಬಿಳಿ ಮತ್ತು ಕಪ್ಪು ಮಿಶ್ರಿತ ಗಡ್ಡಮೀಸೆ ಬಿಟ್ಟಿದ್ದು, ಕಡುಗಿಣಿ ಹಸಿರು ಬಣ್ಣದ ರೆಡಿಮೇಡ್ ಟೀ-ಶರ್ಟ್,

ಗಿಣಿ ಹಸಿರು ಬಣ್ಣದ ಚೆಕ್ಸ್ ಗೆರೆಗಳಿರುವ ಪಂಚೆ ಹಾಗೂ ಗಿಣಿ ಹಸಿರು ಮತ್ತು ಬಿಳಿ ಬಣ್ಣದ ಉದ್ದಗೆರೆಗಳಿರುವ ಟವೆಲ್ ಇರುತ್ತದೆ. ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ದೇಹವನ್ನು ಇರಿಸಲಾಗಿದೆ.

ಈ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್‌ ಇನ್ಸ್’ಪೆಕ್ಟರ್ ದೂರವಾಣಿ ಸಂಖ್ಯೆ 08182222974 ನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ತಿಳಿಸಿದ್ದಾರೆ.

Shivamogga, Mar 10: The bodies of two men have been found in separate incidents. The police have appealed to the public to cooperate in finding the heirs.

shimoga | Shivamogga: In which areas will there be no electricity on March 17? shimoga | ಶಿವಮೊಗ್ಗ : ಯಾವೆಲ್ಲ ಪ್ರದೇಶಗಳಲ್ಲಿ ಮಾ. 17 ರಂದು ವಿದ್ಯುತ್ ಇರಲ್ಲ? Previous post shimoga | ಶಿವಮೊಗ್ಗ : ಮಾ.11 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ!
Shivamogga: Car overturns after hitting an electric pole! ಶಿವಮೊಗ್ಗ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು! Next post shimoga | ಶಿವಮೊಗ್ಗ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು!