Shivamogga: Car overturns after hitting an electric pole! ಶಿವಮೊಗ್ಗ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು!

shimoga | ಶಿವಮೊಗ್ಗ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು!

ಶಿವಮೊಗ್ಗ (shivamogga), ಮಾ. 11: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ, ಶಿವಮೊಗ್ಗ ನಗರದ ಹೊರವಲಯ ಸೋಮಿನಕೊಪ್ಪ – ಗೆಜ್ಜೇನಹಳ್ಳಿ ನಡುವಿನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಕೆಹೆಚ್’ಬಿ ಪ್ರೆಸ್ ಕಾಲೋನಿ ಸಮೀಪದ ಬಾರ್ ಕಟ್ಟಡದ ಬಳಿ ಮಾರ್ಚ್ 10 ರ ರಾತ್ರಿ 10. 30 ರ ಸುಮಾರಿಗೆ ಘಟನೆ ನಡೆದಿದೆ.

ಗೆಜ್ಜೇನಹಳ್ಳಿ ಕಡೆಯಿಂದ ವಿನೋಬನಗರ ಪೊಲೀಸ್ ಚೌಕಿಯೆಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಉರುಳಿ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಾರಿನಲ್ಲಿದ್ದ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.  ವಿದ್ಯುತ್ ಕಂಬ ಸಂಪೂರ್ಣ ನಜ್ಜುಗ್ಗುಜ್ಜಾಗಿದೆ. ಘಟನೆಯಿಂದ ಸುತ್ತಮುತ್ತಲಿನ ಬಡಾವಣೆಗಳಲ್ಲಿ ಕೆಲ ಸಮಯ ವಿದ್ಯುತ್ ವ್ಯತ್ಯಯವಾಗಿತ್ತು.

ರಾತ್ರಿಯೇ ತಾತ್ಕಾಲಿಕ ದುರಸ್ತಿ ಕಾರ್ಯ ನಡೆಸಿದ ಮೆಸ್ಕಾಂ ಸಿಬ್ಬಂದಿಗಳು, ಬಡಾವಣೆಗಳಿಗೆ ವಿದ್ಯುತ್ ಪೂರೈಕೆ ಮಾಡಿ ನೆರವಾಗಿದ್ದಾರೆ.

ಅಪಘಾತದ ಹೆದ್ದಾರಿ : ವಿನೋಬನಗರ ಪೊಲೀಸ್ ಚೌಕಿಯಿಂದ ಸೋಮಿನಕೊಪ್ಪದವರೆಗಿನ ಹೆದ್ದಾರಿಯು ದ್ವಿಪಥ ಮಾರ್ಗವಿದೆ. ಆದರೆ ಅಲ್ಲಿಂದ ಮುಂದೆ ರಸ್ತೆಯು ಸಂಪೂರ್ಣ ಕಿರಿದಾಗಿದೆ. ಸದರಿ ರಾಜ್ಯ ಹೆದ್ದಾರಿಯಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಅಪಘಾತಗಳ ಪ್ರಮಾಣವೂ ಏರಿಕೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸೋಮಿನಕೊಪ್ಪದಿಂದ ಕೆ ಹೆಚ್ ಬಿ ಪ್ರೆಸ್ ಕಾಲೋನಿ ನಡುವಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಹೆದ್ದಾರಿಯನ್ನು ವೈಜ್ಞಾನಿಕವಾಗಿ ಅಗಲೀಕರಣಗೊಳಿಸಬೇಕಾಗಿದೆ. ಈಗಾಗಲೇ ಈ ಸಂಬಂಧ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರುತ್ತಾರೆ.

ತಕ್ಷಣವೇ ಲೋಕೋಪಯೋಗಿ ಇಲಾಖೆಯು ಸದರಿ ಹೆದ್ದಾರಿ ಅಗಲೀಕರಣಗೊಳಿಸಿ, ಸುಗಮ ವಾಹನ ಸಂಚಾರಕ್ಕೆ ಕ್ರಮಕೈಗೊಳ್ಳಬೇಕು. ನಗರ ವ್ಯಾಪ್ತಿಯ ಪ್ರದೇಶದಲ್ಲಿ ವಾಹನಗಳ ಮಿತಿಮೀರಿದ ವೇಗ ಕಡಿವಾಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ನಾಗರೀಕರು ಆಗ್ರಹಿಸಿದ್ದಾರೆ.

Shivamogga, March 11: An incident occurred on the state highway between Sominakoppa and Gejjenahalli on the outskirts of Shivamogga city, where a car lost control and crashed into an electric pole on the side of the road. The incident took place at around 10:30 pm on March 10 near a bar building near KHB Press Colony.

The car was heading towards Vinobanagar police chowki from Gejjenahalli. Locals said that the driver lost control of the car and hit an electric pole on the side of the road, causing it to overturn.

The highway from Vinobanagar police post to Sominakoppa is a two-lane road. But from there onwards the road becomes completely narrow. The traffic congestion on the said state highway is increasing day by day. The number of accidents is also increasing.

In this context, the highway under the jurisdiction of the Municipal Corporation between Sominakoppa and KHB Press Colony needs to be scientifically widened. Locals complain that despite several requests to the Public Works Department (PWD) in this regard, it has not been of any use.

Shimoga : The body of an anonymous man was found in the channel water! ಶಿವಮೊಗ್ಗ : ಚಾನಲ್ ನೀರಿನಲ್ಲಿ ಅನಾಮಧೇಯ ಪುರುಷನ ಶವ ಪತ್ತೆ! Previous post shimoga | ಶಿವಮೊಗ್ಗ : ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಪುರುಷರ ಶವ ಪತ್ತೆ!
Shivamogga: There will be no electricity in these areas on October 15th! ಶಿವಮೊಗ್ಗ : ಅಕ್ಟೋಬರ್ 15 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ! Next post shimoga | ಶಿವಮೊಗ್ಗ ನಗರದ ವಿವಿಧೆಡೆ ಮಾ.12 ರಂದು ವಿದ್ಯುತ್ ವ್ಯತ್ಯಯ!