
shimoga | ಶಿವಮೊಗ್ಗ : ಸಿಬ್ಬಂದಿಯಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ!
ಶಿವಮೊಗ್ಗ (shivamogga), ಮಾ. 25: ಸಿಬ್ಬಂದಿಯೋರ್ವರಿಂದ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಡಿಎಆರ್) ಡಿವೈಎಸ್ಪಿ ಓರ್ವರನ್ನು, ಲಂಚದ ಹಣದ ಸಮೇತ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ ಶಿವಮೊಗ್ಗ ನಗರದಲ್ಲಿ ಮಾ. 25 ರಂದು ನಡೆದಿದೆ.
ಡಿಎಆರ್ DYSP ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದವರೆಂದು ಗುರುತಿಸಲಾಗಿದೆ. ಇವರು ತಮ್ಮ ನಿವಾಸದಲ್ಲಿ ಸಿಬ್ಬಂದಿಯೋರ್ವರಿಂದ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಕರ್ತವ್ಯಕ್ಕೆ ನಿಯೋಜನೆ ಮಾಡುವುದಕ್ಕೆ ಸಂಬಂಧಿಸಿದಂತೆ ಡಿಎಆರ್ ಸಿಬ್ಬಂದಿ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಸಿಬ್ಬಂದಿಯು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು.
ಮಂಗಳವಾರ ತಮ್ಮ ನಿವಾಸದಲ್ಲಿ ಸಿಬ್ಬಂದಿಯಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಲಂಚದ ಹಣದ ಸಮೇತ ಡಿವೈಎಸ್ಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ನೇತೃತ್ವದ ಪೊಲೀಸ್ ತಂಡ ಸದರಿ ಕಾರ್ಯಾಚರಣೆ ನಡೆಸಿದೆ. ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ.
Shivamogga, Mar. 25: An incident took place in Shivamogga city on Mar. 25 when a DySP of the Armed Reserve Police Force (DAR) was arrested along with the bribe money while accepting a bribe of Rs. 5,000 from a staff member.
DySP Krishnamurthy has been identified as the person who fell into the trap of the Lokayukta. It is learnt that the Lokayukta police raided and detained him while he was accepting a bribe from a staff member at his residence.